ರಾಷ್ಟ್ರೀಯ

ದೇಶದಲ್ಲಿ ಕೊರೊನಾ ಔಷಧ ತಯಾರಿಕೆಗೆ ಪರವಾನಗಿ ಪಡೆದ ಸಂಸ್ಥೆಗಳಾವುವು ಗೊತ್ತಾ?

Pinterest LinkedIn Tumblr
F

ನವದೆಹಲಿ: ಕೊವೀಡ್ -19ಗೆ ಔಷಧಿ ತಯಾರಿಕೆಗೆ ದೇಶದ 7 ಸಂಸ್ಥೆಗಳಿಗೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆ (CDSCO) ಪರವಾನಗಿ ನೀಡಿದೆ.

ಈ ಕುರಿತು ಲೋಕಸಭೆಗೆ ಲಿಖಿತ ಹೇಳಿಕೆ ನೀಡಿರುವ ಆರೋಗ್ಯ ಇಲಾಖೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು, ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆ ಭಾರತದ ಏಳು ಔಷಧ ತಯಾರಕಾ ಸಂಸ್ಥೆಗಳಿಗೆ ಪೂರ್ವಭಾವಿ ಪರೀಕ್ಷೆ, ಪರೀಕ್ಷೆ ಮತ್ತು ವಿಶ್ಲೇಷಣೆಗಾಗಿ ಕೋವಿಡ್ ಲಸಿಕೆ ತಯಾರಿಸಲು ಪರೀಕ್ಷಾ ಪರವಾನಗಿ ಅನುಮತಿ ನೀಡಿದೆ. ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆ ನೀಡಿರುವ ಮಾರ್ಗದರ್ಶಿ ಸೂತ್ರಗಳ ಅನ್ವಯ ಮತ್ತು ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ಅಡಿಯಲ್ಲಿನ ನಿಯಮಗಳ ಪ್ರಕಾರವೇ ಔಷಧಿಗಳ ಪರೀಕ್ಷೆ ನಡೆಯಲಿದ್ದು, ಈ ಕುರಿತಂತೆ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

SARS-CoV-2ಗೆ ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ ಲಿಮಿಟೆಡ್ ಲಸಿಕೆ ಸಂಶೋಧನೆ ನಡೆಸುತ್ತಿದ್ದು, ಈ ಲಸಿಕೆಯ ಪ್ರಯೋಗ ಪುಣೆಯಲ್ಲಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರದಲ್ಲಿ ಐಸಿಎಂಆರ್ ಅಡಿಯಲ್ಲಿ ನಡೆಯುತ್ತಿದೆ. ಲಸಿಕೆಯ ಗುಣಲಕ್ಷಣವನ್ನು ಇಲಿಗಳು ಮತ್ತು ಮೊಲಗಳಂತಹ ಸಣ್ಣ ಪ್ರಾಣಿಗಳ ಮೇಲೆ ಪ್ರಯೋಗ ನಡೆಸಿ, ಸುರಕ್ಷತೆ ಮತ್ತು ಸಹಿಷ್ಣುತೆ ಇತ್ಯಾದಿ ಅಂಶಗಳ ಕುರಿತು ಸಂಶೋಧನೆ ನಡೆಸಲಾಗುತ್ತದೆ. ಈಗಾಗಲೇ ಈ ಲಸಿಕೆಯ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಗಳು ಕೂಡ ನಡೆಯುತ್ತಿವೆ ಎಂದು ಹೇಳಲಾಗಿದೆ.

ಈ ಲಸಿಕೆಯ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. ಇದಲ್ಲದೆ ಭಾರತ್ ಬಯೋಟೆಕ್‌, ಬಯಲಾಜಿಕಲ್‌ ಇ, ರಿಲಯನ್ಸ್ ಲೈಫ್‌, ಅರಬಿಂದೋ ಫಾರ್ಮ ಮತ್ತು ಜೆನೋವಾ ಸಂಸ್ಥೆಗಳ ಲಸಿಕೆ ತಯಾರಿಕೆ ಮತ್ತು ಕ್ಲಿನಿಕಲ್ ಪ್ರಯೋಗಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.

Comments are closed.