
ನವದೆಹಲಿ: ದೇಶದಲ್ಲಿ ಇಂದು 92,605 ಕೊರೋನಾ ಪ್ರಕರಣಗಳು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಇನ್ನು ಒಂದು ಕಳೆದ 24 ಗಂಟೆಗಳಲ್ಲಿ 1,133 ಮಂದಿ ಸಾವನ್ನಪ್ಪುವುದರೊಂದಿಗೆ ಮಹಾಮಾರಿ ವೈರಸ್ ಈವರೆಗೂ 86,752 ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಭಾರತದಲ್ಲಿ ಪ್ರಸ್ತುತ ಒಟ್ಟು ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದ್ದು, 54 ಲಕ್ಷ ಸೋಂಕಿತರ ಪೈಕಿ ಈವರೆಗೂ 43,03,044 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಇನ್ನೂ 10,10,824 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ.
Comments are closed.