ರಾಷ್ಟ್ರೀಯ

ಅನ್‌ಲಾಕ್ 5.0 ಮಾರ್ಗಸೂಚಿ ಬಿಡುಗಡೆ: ಚಿತ್ರಮಂದಿರದಲ್ಲಿ ಶೇ.50 ಜನ ವೀಕ್ಷಣೆಗೆ ಅವಕಾಶ!

Pinterest LinkedIn Tumblr


ಹೊಸದಿಲ್ಲಿ: ಕೇಂದ್ರವು ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅ.15ರ ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದು, ಶೇ.50 ಜನ ವೀಕ್ಷಣೆ ಅವಕಾಶ ನೀಡಿದೆ.

ಇಷ್ಟು ಮಾತ್ರವಲ್ಲದೆ ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಮತ್ತು ಮಾಹಿತಿ ಪ್ರಸಾರ ಖಾತೆ ಸಚಿವಾಲಯ, ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಅತ್ಯಂತ ಶಿಸ್ತುಬದ್ಧವಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಪ್ರಮುಖವಾಗಿ ಸಿನಿಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳನ್ನು ತೆರಯಲು ಅನುಮತಿ ನೀಡಲಾಗಿದ್ದು, ತನ್ನ ಸಾಮರ್ಥ್ಯದ ಶೇ.50ರಷ್ಟು ವೀಕ್ಷಕರಿಗೆ ಮಾತ್ರ ಸ್ಥಳಾವಕಾಶ ಕಲ್ಪಿಸುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಸಿನಿಮಾ ಹಾಲ್, ಮನೋರಂಜನಾ ಪಾರ್ಕ್‌ಗಳಲ್ಲಿ ಕೇಂದ್ರದ ಕೊರೊನಾ ಮಾರ್ಗಸೂಚಿಗಳ ಪಾಲನೆ ಕಡ್ಡಾಯ ಎಂದು ತಿಳಿಸಲಾಗಿದ್ದು, ಕ್ರೀಡಾ ತರಬೇತಿಗೂ ಈ ನಿಯಮಗಳು ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.

ಇನ್ನು ಮುಂಬರುವ ಅಕ್ಟೋಬರ್ 15ರಿಂದ ಶಾಲಾ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು,ಅದಾಗ್ಯೂ ಅಂತಿಮ ತೀರ್ಮಾನವನ್ನು ಆಯಾ ರಾಜ್ಯ ಸರ್ಕಾರಗಳೇ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ.

ಒಟ್ಟಿನಲ್ಲಿ ದೇಶದಲ್ಲಿ ಅನ್‌ಲಾಕ್ 5.0ಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ, ಹಂತ ಹಂತವಾಗಿ ದೇಶವನ್ನು ಸಹಜ ಸ್ಥಿತಿಗೆ ಮರಳಿ ತರಲು ಮುಂದಾಗಿರುವುದು ಸ್ಪಷ್ಟ.

ಈ ಎಲ್ಲಾ ಮಾರ್ಗಸೂಚಿಗಳು ಅಕ್ಟೋಬರ್ 15ರ ನಂತರವೇ ಜಾರಿಗೆ ಬರಲಿದ್ದು, ಸಾಮಾಜಿಕ ಜೀವನ ಈ ಮೊದಲಿನ ಸ್ಥಿತಿಗೆ ಮರಳಲಿದೆ ಎಂದು ನಿರೀಕ್ಷಿಸಲಾಗಿದೆ.

Comments are closed.