ಉತ್ತರಪ್ರದೇಶ: ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ಎಫ್‌ಐಆರ್ ಅನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 188(ಸಾರ್ವಜನಿಕ ಸೇವೆಯಲ್ಲಿದ್ದು ಆದೇಶ ಪಾಲನೆ ಮಾಡದಿರುವುದು), 269 (ಕಾನೂನುಬಾಹಿರವಾಗಿ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ಯಾವುದೇ ರೋಗದ ಸೋಂಕನ್ನು ಹರಡುವುದು), 270 (ಜೀವಕ್ಕೆ ಅಪಾಯಕಾರಿ ರೋಗದ ಸೋಂಕನ್ನು ಹರಡುವ ಸಾಧ್ಯತೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೆ ಮುನ್ನ ಪಕ್ಷದ ಹಿರಿಯ ನಾಯಕರು ಸೇರಿದಂತೆ ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರು, ಗ್ರೇಟರ್ ನೋಯ್ಡಾದ ಎಕ್ಸ್‌ಪ್ರೆಸ್‌ವೇಗಳಲ್ಲಿ ಪ್ಯಾರಿ ಚೌಕ್ ಬಳಿ ತಮ್ಮ ಬೆಂಗಾವಲು ವಾಹನ ನಿಲ್ಲಿಸಿ ಮೆರವಣಿಗೆ ಆರಂಭಿಸಿದ್ದರು. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮತ್ತು ಸುಮಾರು 150 ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಈ ಸಮಯ ಕ್ಷಿಪ್ರವಾಗಿ ಬಂಧಿಸಿ ನಂತರ ವೈಯಕ್ತಿಕ ಬಾಂಡ್ ನ ಮೇಲೆ ಬಿಡುಗಡೆ ಮಾಡಿದರು ಎನ್ನಲಾಗಿದೆ.
Comments are closed.