ರಾಷ್ಟ್ರೀಯ

ಹತ್ರಾಸ್ ಅತ್ಯಾಚಾರ ಪ್ರಕರಣ: ಐವರು ಪೊಲೀಸರನ್ನು ಅಮಾನತುಗೊಳಿಸಿದ ಮುಖ್ಯಮಂತ್ರಿ ಯೋಗಿ!

Pinterest LinkedIn Tumblr


ಲಖನೌ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಆಧಾರದ ಮೇಲೆ ಐವರು ಪೊಲೀಸರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಮಾನತು ಆದೇಶ ಹೊರಡಿಸಿದ್ದಾರೆ.

ವಿಶೇಷ ತನಿಖಾ ತಂಡ(ಎಸ್‌ಐಟಿ) ನೀಡಿದ ವರದಿಯ ಆಧಾರದ ಮೇಲೆ ಓರ್ವ್ ಎಸ್‌ಪಿ ಸೇರಿದಂತೆ ಒಟ್ಟು ಐದು ಜನರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಸಂತ್ರಸ್ತೆಯ ಅಂತ್ಯಸಂಸ್ಕಾರವೂ ಸೇರಿದಂತೆ ಇಡೀ ಪ್ರಕರಣವನ್ನು ನಿಭಾಯಿಸುವಲ್ಲಿ, ಈ ಐವರು ಪೊಲೀಸ್ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟೇ ಅಲ್ಲದೇ ಅತ್ಯಾಚಾರ ಮತ್ತು ಕೊಲೆ ಆರೋಪ ಎದುರಿಸುತ್ತಿರುವ ಆರೋಪಿಗಳು ಹಾಗೂ ಸಂತ್ರಸ್ತೆಯ ಕುಟುಂಬದವರನ್ನು ನಾರ್ಕೋ ಅನಾಲಿಸಿಸ್ ಮತ್ತು ಸುಳ್ಳು ಪತ್ತೆ ಪರೀಕ್ಷೆಗೆ ಗುರಿ ಮಾಡಬೇಕು ಎಂದೂ ಎಸ್‌ಐಟಿ ವರದಿಯಲ್ಲಿ ಹೇಳಲಾಗಿದೆ. ಅಲ್ಲದೇ ಅಮಾನತುಗೊಂಡ ಅಧಿಕಾರಿಗಳ ಪರೀಕ್ಷೆಯೂ ನಡೆಯಲಿದೆ.

ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಕಾರ್ಯಾಲಯ ಆದೇಶ ಹೊರಡಿಸಿದ್ದು, ಎಸ್‌ಐಟಿ ವರದಿಯಾಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ಅಮಾನತುಗೊಂಡ ಅಧಿಕಾರಿಗಳು:
ವಿಕ್ರಾಂತ್ ವೀರ್-ಎಸ್‌ಪಿ
ದಿನೇಶ್ ಕುಮಾರ್ ವರ್ಮಾ-ಪ್ರಭಾರಿ ಎಸ್‌ಪಿ
ರಾಮ ಶಬ್ಧ್-ಕ್ಷೇತ್ರಾಧಿಕಾರಿ
ಜಗವೀರ್ ಸಿಂಗ್-ಸಬ್ ಇನ್ಸಪೆಕ್ಟರ್
ಮಹೇಶ್ ಪಾಲ್-ಹೆಡ್ ಕಾನ್ಸಟೇಬಲ್

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರೀ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Comments are closed.