ರಾಷ್ಟ್ರೀಯ

ಚಳಿಗಾಲದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳ: ಡಾ. ಹರ್ಷವರ್ಧನ್‌

Pinterest LinkedIn Tumblr


ನವದೆಹಲಿ: ದೇಶದಲ್ಲಿ ಚಳಿಗಾಲ ಸಮಯದಲ್ಲಿ ಕೊರೋನಾ ಪ್ರಕರಣಗಳು ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ಎಚ್ಚರಿಕೆ ನೀಡಿದ್ದಾರೆ.

ವಾರದ ಸಾಮಾಜಿಕ ಜಾಲತಾಣಗಳ ಕಾರ್ಯಕ್ರಮ ‘ಸಂವಾದ’ದಲ್ಲಿ ಪಾಲ್ಗೊಂಡ ಅವರು, ಕೊರೋನಾ ವೈರಸ್ ಶ್ವಾಸಕೋಶದ ವೈರಸ್ ಆಗಿದ್ದು, ತಂಪು ವಾತಾವರಣದಲ್ಲಿ ಉಸಿರಾಟದ ವೈರಸ್ ಹರಡುವುದು ಹೆಚ್ಚಾಗುತ್ತದೆ. ತಂಪು ಹವಾಮಾನ ಮತ್ತು ಕಡಿಮೆ ಆರ್ದ್ರತೆಯ ಸ್ಥಿತಿಯಲ್ಲಿ ಶ್ವಾಸಕೋಶದ ವೈರಸ್‌ಗಳು ಹೆಚ್ಚಾಗುತ್ತದೆ.

ನೆನಪಿನಲ್ಲಿಟ್ಟುಕೊಳ್ಳಬೇಕಾದ ಇನ್ನೊಂದು ಸಂಗತಿಯೆಂದರೆ, ಚಳಿಗಾಲದ ಸಮಯದಲ್ಲಿ, ವಸತಿ ನಿವಾಸಗಳಲ್ಲಿ ಜನದಟ್ಟಣೆ ಹೆಚ್ಚಾಗುವ ಪ್ರವೃತ್ತಿ ಇದೆ. ಇದು ಸೋಂಕಿನ ಪ್ರಸರಣವನ್ನು ಹೆಚ್ಚಿಸಬಹುದು. ಆದ್ದರಿಂದ ಭಾರತದ ಚಳಿಗಾಲದ ಋತುವಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆಗಳನ್ನು ತಳ್ಳಿ ಹಾಕಲಾಗದು ಎಂದಿದ್ದಾರೆ.

ಇದೇ ವೇಳೆ, ಸಾಲು ಸಾಲು ಹಬ್ಬಗಳು ಸಹ ಬರುತ್ತಿದೆ. ಜನರು ಹೆಚ್ಚಾಗಿ ಒಂದೇ ಕಡೆ ಸೇರುವ ಸಾಧ್ಯತೆಗಳು ಹೆಚ್ಚಾಗಿದೆ. ಈ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಅನುಸರಿಸದೆ ಹೋದರೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತದೆ ಎಂದರು.

Comments are closed.