ರಾಷ್ಟ್ರೀಯ

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಗೆ ಕೊರೋನಾ

Pinterest LinkedIn Tumblr


ನವದೆಹಲಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. .

71 ವರ್ಷದ ಕಾಂಗ್ರೆಸ್ ಮುಖಂಡ ಆಜಾದ್ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಇತ್ತೀಚಿನ ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರು ಸ್ವಯಂ ಸಂಪರ್ಕತಡೆ ಹಾಗೂ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವಂತೆ ಹಾಗೂ ಕೊರೋನಾ ಪ್ರೋಟೋಕಾಲ್ ಗಳನ್ನು ಅನುಸರಿಸಲು ಮನವಿ ಮಾಡೀದ್ದಾರೆ.

“ನಾನು ಕೋವಿಡ್ -19 ಗಾಗಿ ಧನಾತ್ಮಕ ವರದಿ ಪಡೆದಿದ್ದೇನೆ. ನಾನೀಗ ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿರಿ” ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಹಿರಿಯ ನಾಯಕರಾದ ಅಹ್ಮದ್ ಪಟೇಲ್, ಮೋತಿಲಾಲ್ ವೊರಾ ಮತ್ತು ಅಭಿಷೇಕ್ ಮನು ಸಿಂಘ್ವಿ ಕೋವಿಡ್ -19 ಸೋಂಕಿಗೆ ಒಳಗಾಗಿದ್ದರು.ಇವರ ಪೈಕಿ ಸಿಂಘ್ವಿ ಚೇತರಿಸಿಕೊಂಡಿದ್ದರೆ ಇತರೆ ನಾಯಕರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.