ರಾಷ್ಟ್ರೀಯ

ಕೊರೋನಾದ ಸಮುದಾಯ ಪ್ರಸರಣವನ್ನು ಪ್ರಥಮ ಬಾರಿ ಒಪ್ಪಿಕೊಂಡ ಕೇಂದ್ರ

Pinterest LinkedIn Tumblr


ನವದೆಹಲಿ: ದೇಶದಲ್ಲಿ ಕೊರೋನಾ ಸಮುದಾಯ ಪ್ರಸರಣವನ್ನು ಇದೇ ಪ್ರಥಮ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.

ವಾರದ ವೆಬಿನಾರ್’ ಸಂಡೇ ಸಂವಾದ’ದಲ್ಲಿ ಸಾಮಾಜಿಕ ಮಾಧ್ಯಮಗಳ ಪ್ರೇಕ್ಷಕರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದಾಗಿ ಒಪ್ಪಿಕೊಂಡರು.

ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಶೇಷವಾಗಿ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಕೋವಿಡ್-19 ಸಮುದಾಯ ಹಂತ ತಲುಪಿರುವ ನಿರೀಕ್ಷೆಯಿದೆ. ಆದಾಗ್ಯೂ, ದೇಶಾದ್ಯಂತ ಇದು ತಲುಪಿಲ್ಲ. ಕೆಲವೇ ಜಿಲ್ಲೆಗಳಿಗೆ ಮಾತ್ರ ಇದು ಸೀಮಿತವಾಗಿದೆ ಎಂದರು.

Comments are closed.