ರಾಷ್ಟ್ರೀಯ

ನ. 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ

Pinterest LinkedIn Tumblr
Passen

ಹೊಸದಿಲ್ಲಿ: ಮಹಾಮಾರಿ ಕೊರೊನಾ ಸಾಂಕ್ರಾಮಿಕದಿಂದಾಗಿ ಸ್ಥಗಿತಗೊಂಡಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ನಿರ್ಬಂಧ ನವೆಂಬರ್‌ ಅಂತ್ಯದವರೆಗೆ ಮುಂದುವರಿಯಲಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯ ಈ ವಿಷಯವನ್ನು ಬುಧವಾರ ತಿಳಿಸಿದೆ.

ಆದೆ ನಿರ್ದಿಷ್ಟ ಮಾರ್ಗಗಳಲ್ಲಿ ವಿಮಾನ ಸೇವೆ ಮುಂದುವರಿಯಲಿದೆ. ಅಲ್ಲದೇ ಕೆಲವು ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ವಿಮಾನ ಸೇವೆ ಮುಂದುವರಿಯಲಿದೆ. ಇದಕ್ಕೆ ಸೂಕ್ತ ಅನುಮತಿ ದೊರೆಯಲಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸ್ಪಷ್ಟಪಡಿಸಿದೆ.

ಕೋವಿಡ್ ಕಾರಣದಿಂದ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಭಾರತಕ್ಕೆ ಕರೆತರಲು ಏರ್‌ಇಂಡಿಯಾ ಮತ್ತು ದೇಶದಲ್ಲಿನ ಖಾಸಗಿ ವಿಮಾನಯಾನ ಸಂಸ್ಥೆಗಳ ವಂದೇ ಭಾರತ್ ಮಿಷನ್‌ನಡಿ ವಿಮಾನ ಸೇವೆ ಮುಂದುವರಿಯಲಿದೆ.

ಕೊರೊನಾ ನಿಯಂತ್ರಿಸುವ ಸಲುವಾಗಿ ಮಾರ್ಚ್ ತಿಂಗಳಲ್ಲಿ ಕೇಂದ್ರ ಸರಕಾರ ಲಾಕ್‌ಡೌನ್ ಜಾರಿಗೊಳಿಸಿತ್ತು. ಆಗ ಅಂತರಾಷ್ಟ್ರೀಯ ವಿಮಾನ ಯಾನ ಸಂಚಾರವನ್ನೂ ನಿರ್ಬಂಧಿಸಲಾಗಿತ್ತು.

ಈ ನಿರ್ಧಾರ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದಿರುವ ಡಿಜಿಸಿಎ, ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಮುಂದುವರಿಸಿ ಅಧಿಸೂಚನೆ ಹೊರಡಿಸಿದೆ. ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಯಾನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

ಇದೇ ವೇಳೆ ಭಾರತ 18 ದೇಶಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅಮೆರಿಕ, ಯುನೈಟೆಡ್‌ ಕಿಂಗ್‌ಡಮ್‌, ಯುಎಇ, ಕೀನ್ಯಾ, ಭೂತಾನ್‌, ಫ್ರಾನ್ಸ್‌ ಸೇರಿ 18 ದೇಶಗಳೊಂದಿಗೆ ವಿಶೇಷ ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದನ್ವಯ ವಿಶೇಷ ವಿಮಾನಗಳ ಸೇವೆಯನ್ನು ಮುಂದುವರಿಸಲಾಗಿದೆ.

ದೇಶೀಯ ವಿಮಾನ ಸೇವೆಯನ್ನು ಮೇ 25ರಿಂದ ಆರಂಭಿಸಲಾಗಿತ್ತು.

Comments are closed.