ರಾಷ್ಟ್ರೀಯ

ರಾಷ್ಟ್ರೀಯ ಏಕತಾ ದಿನ- ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ

Pinterest LinkedIn Tumblr

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆವಾಡಿಯಾದಲ್ಲಿ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಶನಿವಾರ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆಯನ್ನು 2014 ರಿಂದ ರಾಷ್ಟ್ರೀಯ ಏಕತಾ ದಿವಸ್ ಎಂದು ಆಚರಿಸಲಾಗುತ್ತಿದೆ.

ಗುಜರಾತ್ ನ ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತೆಯ ಪ್ರತಿಮೆಯಿದ್ದು, ಅಲ್ಲಿಗೆ ಪ್ರಧಾನಿ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. ನಂತರ ರಾಷ್ಟ್ರೀಯ ಏಕತಾ ದಿವಸ ಪರೇಡ್ ನೆರವೇರಿದ್ದು ಅದರಲ್ಲಿ ಪ್ರಧಾನಿ ಭಾಗವಹಿಸಿ ವೀಕ್ಷಿಸಿ ಗೌರವ ಸ್ವೀಕರಿಸಿದರು.

ದೇಶದ ಉಕ್ಕಿನ ಮನುಷ್ಯ ಎಂದೇ ಜನಪ್ರಿಯರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ಏಕತಾ ದಿನವನ್ನಾಗಿ ಆಚರಿಸುವುದಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ಜಾರಿಗೆ ತಂದಿದ್ದು ಪ್ರತಿವರ್ಷ ಅಕ್ಟೋಬರ್ 31ರಂದು ಆಚರಿಸಲಾಗುತ್ತದೆ. ಈ ವರ್ಷ ಅವರ 145ನೇ ಜಯಂತಿ.

 

 

Comments are closed.