ರಾಷ್ಟ್ರೀಯ

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಮುಂಬೈ ಪೊಲೀಸರ ದಾಳಿ- ಆತ್ಮಹತ್ಯೆ ಪ್ರಚೋದನೆ ಕೇಸಿನಲ್ಲಿ ಅರೆಸ್ಟ್ (Updated)

Pinterest LinkedIn Tumblr

ಮುಂಬೈ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮನೆಗೆ ಮುಂಬೈ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ ಬಗ್ಗೆ ಮಾಹಿತಿ ಲಭಿಸಿದೆ.

ಬುಧವಾರ ಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಲು ಯತ್ನಿಸಿದರು. ಈ ವೇಳೆ ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಪೊಲೀಸರು ಯತ್ನಿಸಿದರು. ಅಲ್ಲದೆ ತಮ್ಮ ಪತ್ನಿ, ಪುತ್ರ, ಅತ್ತೆ-ಮಾವಂದಿರ ಮೇಲೆ ಕೂಡ ಹಲ್ಲೆ ನಡೆಸಲು ಯತ್ನಿಸಿದರು ಎಂದು ಅರ್ನಬ್ ಆರೋಪಿಸಿದ್ದಾರೆ.

2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

Comments are closed.