ಮನೋರಂಜನೆ

ತೆಲಗು ನಟ ‘ಮೆಗಾ ಸ್ಟಾರ್’ ಚಿರಂಜೀವಿಗೆ ಕೊರೊನಾ ಪಾಸಿಟಿವ್‌!

Pinterest LinkedIn Tumblr

ಹೈದರಾಬಾದ್: ತೆಲುಗಿನ ಖ್ಯಾತ ನಟ ಮೇಗಾ ಸ್ಟಾರ್ ಚಿರಂಜೀವಿ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಈ ಬಗ್ಗೆ ಖುದ್ದು ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೋವಿಡ್ ಶಿಷ್ಟಾಚಾರದಂತೆ ‘ಆಚಾರ್ಯ’ ಚಿತ್ರದ ಶೂಟಿಂಗ್ ಗೆ ತೆರಳುವ ಮೊದಲಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡೆ‌. ಆ ವೇಳೆ ಪಾಸಿಟಿವ್ ಬಂದಿದ್ದು ಯಾವುದೇ ರೋಗಲಕ್ಷಣಗಳು ಇಲ್ಲದಿರುವುದರಿಂದ ಮನೆಯಲ್ಲಿಯೇ ಕ್ವಾರಂಟೈನ್ ಇದ್ದು, ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ಯಾವುದೇ ಆತಂಕವಿಲ್ಲ, ಆದಷ್ಟು ಶೀಘ್ರವೇ ಗುಣಮುಖನಾಗಿ ನಿಮ್ಮ ಮುಂದೆ ಮತ್ತೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಚಿರಂಜೀವಿ ಅವರು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ, ಪ್ರವಾಹ ಪರಿಹಾರ ನಿಧಿಗೆ ದೊಡ್ಡ ಮೊತ್ತದ ಹಣ ನೀಡಿದ್ದರು.

Comments are closed.