ರಾಷ್ಟ್ರೀಯ

ಕರ್ನಾಟಕದ ಮತದಾರರಿಗೆ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮೂಲಕ ಧನ್ಯವಾದ

Pinterest LinkedIn Tumblr


ನವದೆಹಲಿ: ಉಪ ಚುನಾವಣೆಯ 2 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿದ ರಾಜ್ಯದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಅಮಿತ್ ಶಾ ಟ್ವೀಟ್: ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣೆ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ.

Comments are closed.