ಮನೋರಂಜನೆ

ಪಂಜಾಬ್ ಚುನಾವಣಾ ರಾಯಭಾರಿಯಾಗಿ ನಟ ಸೋನು ಸೂದ್ ನೇಮಕ

Pinterest LinkedIn Tumblr

ನವದೆಹಲಿ: ಪಂಜಾಬ್ ರಾಜ್ಯದ ಚುನಾವಣಾ ರಾಯಭಾರಿಯಾಗಿ ನಟ ಸೋನು ಸೂದ್ ಅವರನ್ನು ಭಾರತೀಯ ಚುನಾವಣಾ ಆಯೋಗ ನೇಮಿಸಿದೆ.

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸೋನುಸೂದ್ ಅವರ ಮಾನವೀಯ ಕಾಳಜಿಯನ್ನು ಗುರುತಿಸಿ ಪಂಜಾಬ್ ಚುನಾವಣಾ ಅಧಿಕಾರಿ ಎಸ್ ಕರುಣಾ ರಾಜ್ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದು, ಅದಕ್ಕೆ ಅನುಮೋದನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಲಾಕ್‌ಡೌನ್ ಸಮಯದಲ್ಲಿ ಪಂಜಾಬ್‌ನ ಮೊಗಾ ಜಿಲ್ಲೆಗೆ ಸೇರಿದ ವಲಸಿಗರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡಿ ಸೋನು ಸೂದ್ ಅವರು ಸುದ್ದಿಯಾಗಿದ್ದರು.

ಅಲ್ಲದೆ ಸೋನು ಸೂದ್ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ತಲುಪಲು ಸಾರಿಗೆ ಸೌಲಭ್ಯಗಳನ್ನು ಏರ್ಪಡಿಸಿದ್ದರು. ವಿದ್ಯಾರ್ಥಿಗಳ ಆನ್ಲೈನ್ ಕಲಿಕೆಗೆ ಸಹಕರಿಸಿದ್ದು ಅವರ ಮಾನವೀಯ ಕಾರ್ಯಕ್ಕೆ ಅಪಾರ ಮೆಚ್ಚುಗೆ ಸಿಕ್ಕಿತ್ತು.

Comments are closed.