ರಾಷ್ಟ್ರೀಯ

ರೈತ ಸಂಘಟನೆಯ ಮುಖಂಡರೊಂದಿಗೆ ಮಾತುಕತೆ: ನೂತನ ಕೃಷಿ ಕಾಯ್ದೆ ಹಿಂಪಡೆಯಲು ನಿರಾಕರಿಸಿದ ಕೇಂದ್ರ

Pinterest LinkedIn Tumblr


ನವದೆಹಲಿ: ರೈತ ಸಂಘಟನೆಯ ಮುಖಂಡರೊಂದಿಗೆ ಕೇಂದ್ರವು ಮಂಗಳವಾರ ಮಾತುಕತೆ ಆಹ್ವಾನಿಸಿದ್ದು, ಯಾವುದೇ ಕಾರಣಕ್ಕೂ ನೂತನ ಕಾಯ್ದೆಯನ್ನು ಹಿಂಪಡೆಯಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಬಗ್ಗೆ ಕೇಂದ್ರ ಸರ್ಕಾರ ನೀಡಿದ್ದ ಆಫರ್ ಅನ್ನು ರೈತ ಮುಖಂಡರು ತಿರಸ್ಕರಿಸಿರುವುದಾಗಿ ಮೂಲಗಳು ತಿಳಿಸಿವೆ.

ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕಳೆದ ಐದು ದಿನಗಳಿಂದ ಪಂಜಾಬ್ ಮತ್ತು ಹರ್ಯಾಣ ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಏತನ್ಮಧ್ಯೆ ಷರತ್ತುಬದ್ಧ ಮಾತುಕತೆ ಆಹ್ವಾನವನ್ನು ರೈತರು ತಿರಸ್ಕರಿಸಿದ್ದರು.

ಕೃಷಿ ಸಚಿವ ನರೇಂದ್ರ ಸಿಂಗ್ ಟೋಮರ್, ಪಿಯೂಸ್ ಗೋಯಲ್ ಹಾಗೂ ಸೋಮ್ ಪ್ರಕಾಶ್ ರೈತ ಸಂಘಟನೆಯ ಮುಖಂಡರ ಜತೆ ನೂತನ ಕಾಯ್ದೆ ಕುರಿತು ಮಾತುಕತೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

Comments are closed.