ರಾಷ್ಟ್ರೀಯ

ನ್ಯಾಯಾಧೀಶರ ಹೆಂಡತಿಯರ ವಿರುದ್ಧ ಅಶ್ಲೀಲ ಹೇಳಿಕೆ: ಹೈಕೋರ್ಟ್ ಮಾಜಿ ನ್ಯಾಯಾಧೀಶ ಬಂಧನ

Pinterest LinkedIn Tumblr


ನವದೆಹಲಿ: ನ್ಯಾಯಾಧೀಶರ ಹೆಂಡತಿಯರ ವಿರುದ್ಧ ಆಶ್ಲೀಲ ಹೇಳಿಕೆ ನೀಡಿದ ಆರೋಪದಲ್ಲಿ ಹೈಕೋರ್ಟ್ ಮಾಜಿ ನ್ಯಾಯಾಧೀಶ ಸಿಎಸ್ ಕರ್ಣನ್ ಅವರನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ಸಿಎಸ್ ಕರ್ಣನ್ ಹೇಳಿಕೆ ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಬಯಲಾಗಿರುವುದಾಗಿ ವರದಿ ತಿಳಿಸಿದೆ. ಅಶ್ಲೀಲ ಹೇಳಿಕೆ ನೀಡಿರುವ ಕರ್ಣನ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಮಾಜಿ ಜಡ್ಜ್ ಸಿಎಸ್ ಕರ್ಣನ್ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರುಗಳ ಪತ್ನಿಯರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿ ಅದನ್ನು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿರುವುದಾಗಿ ವರದಿ ಹೇಳಿದೆ.

ನ್ಯಾಯಾಂಗ ನಿಂದನೆ ಆರೋಪದಲ್ಲಿ ಕೋಲ್ಕತಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಸಿಎಸ್ ಕರ್ಣನ್ ಅವರು ಬಂಧನಕ್ಕೊಳಗಾಗಿದ್ದರು. ಅಂದು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ಣನ್ ಗೆ ಸುಪ್ರೀಂಕೋರ್ಟ್ ಆರು ತಿಂಗಳ ಶಿಕ್ಷೆ ವಿಧಿಸಿತ್ತು. ಈ ಪ್ರಕರಣದಲ್ಲಿ ಕರ್ಣನ್ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ್ದರು. ಆದರೆ ಅರ್ಜಿಯನ್ನು ತಿರಸ್ಕರಿಸಿದ್ದ ಸುಪ್ರೀಂ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ, ಜೈಲುಶಿಕ್ಷೆಗೆ ಗುರಿಯಾಗಲೇಬೇಕು ಎಂದು ತೀರ್ಪು ನೀಡಿತ್ತು.

Comments are closed.