ರಾಷ್ಟ್ರೀಯ

ಕೋವ್ಯಾಕ್ಸಿನ್‌ ಚುಚ್ಚುಮದ್ದು ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವಗೆ ಕೊರೋನಾ

Pinterest LinkedIn Tumblr


ಚಂಡೀಗಡ: ಕೊರೋನಾ ವಿರುದ್ಧದ ಲಸಿಕೆಯ ಪ್ರಯೋಗಿಕ ಹಿನ್ನೆಲೆಯಲ್ಲಿ ಚುಚ್ಚುಮದ್ದು ನೀಡಲಾಗಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕೊರೋನಾ ದೃಢಪಢ‍ಪಟ್ಟಿದೆ ಎಂದು ಸ್ವತಃ ಸಚಿವರೇ ಟ್ವೀಟ್‌ ಮೂಲಕ ಈ ವಿಷಯ ತಿಳಿಸಿದ್ದಾರೆ.

‘ನನಗೆ ಕೋವಿಡ್‌ ದೃಢಪಟ್ಟಿದೆ. ನಾನು ಅಂಬಾಲಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚಿನ ದಿನಗಳಲ್ಲಿ ನನ್ನ ನಿಕಟ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆಯನ್ನು ಮಾಡಿಸಿಕೊಳ್ಳಿ’ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭಾರತ್ ಬಯೋಟೆಕ್‌ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್‌ ಲಸಿಕೆಯನ್ನು ನವೆಂಬರ್‌ 20ರಂದು ಸಚಿವ ವಿಜ್‌ ಅವರಿಗೆ ನೀಡಲಾಗಿತ್ತು.

Comments are closed.