ರಾಷ್ಟ್ರೀಯ

ಮಾರ್ಚ್ 31ರವರೆಗೂ 1ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯುವುದಿಲ್ಲ

Pinterest LinkedIn Tumblr


ಮಧ್ಯಪ್ರದೇಶ: ಕೊರೋನಾವು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, 1 ರಿಂದ 8ನೇ ತರಗತಿಯವರೆಗಿನ ಶಾಲೆಗಳನ್ನು 2021ರ ಮಾರ್ಚ್ 31 ರವರೆಗೂ ತೆರೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಮಾತ್ರವಲ್ಲದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪರೀಕ್ಷೆಗಳನ್ನು ಎದುರಿಸಬೇಕಾಗಿಲ್ಲ. ಪ್ರೊಜೆಕ್ಟ್ ವರ್ಕ್ ಗಳ ಆಧಾರದ ಮೇಲೆ ಮೌಲ್ಯಮಾಪನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಾಲಾ ಆಡಳಿತ ಮಂಡಳಿಯೊಂದಿಗಿನ ಸಭೆಯ ಬಳಿಕ ಈ ತೀರ್ಮಾನ ಹೊರಡಿಸಲಾಗಿದ್ದು, 2021ರ ಮಾರ್ಚ್ 31ರವರೆಗೂ ಯಾವುದೇ ದೈನಂದಿನ ತರಗತಿಗಳನ್ನು 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲಾಗುವುದಿಲ್ಲ ಎಂಬ ನಿರ್ಣಯಕ್ಕೆ ಬರಲಾಗಿದೆ.

ವಾರ್ಷಿಕ ಪರೀಕ್ಷೆಯ ಹಿನ್ನಲೆಯಲ್ಲಿ ಶೀಘ್ರವಾಗಿ 10 ಮತ್ತು 12ನೇಯ ತರಗತಿಗಳನ್ನು ಆರಂಭಿಸಲಾಗುವುದು. ಆದರೇ ಕೋವಿಡ್ ಮಾರ್ಗಸೂಚಿಗಳನ್ನು ಮತ್ತು ಸಾಮಾಜಿಕ ಅಂತರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. 9 ಮತ್ತು 11ನೇ ತರಗತಿಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಮ್ಮೆ ಅಥವಾ 2 ಬಾರಿಗೆ ತರಗತಿಗೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಇದೇ ವೇಳೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

Comments are closed.