ರಾಷ್ಟ್ರೀಯ

ಬೇಡಿಕೆ ಈಡೇರಿಸದಿದ್ದರೆ ರೈಲು ಹಳಿಗಳು ಬಂದ್: ಕೇಂದ್ರಕ್ಕೆ ರೈತರ ಎಚ್ಚರಿಕೆ

Pinterest LinkedIn Tumblr


ನವದೆಹಲಿ: ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರೈಲ್ವೆ ಹಳಿಗಳನ್ನು ಬಂದ್ ಮಾಡುವುದಾಗಿ ಗುರುವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇಂದು ಸಿಂಘು ಗಡಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ರೈತ ಮುಖಂಡರು, ನಾವು ನಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ದೆಹಲಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ಹಾಗೂ ರೈಲು ಹಳಿಗಳನ್ನು ಬಂದ್ ಮಾಡಲಾಗುವುದು ಎಂದರು.

“ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಶೀಘ್ರದಲ್ಲೇ ರೈಲ್ವೆ ಹಳಿಗಳನ್ನು ಬಂದ್ ಮಾಡುವ ದಿನಾಂಕವನ್ನು ಪ್ರಕಟಿಸುತ್ತೇವೆ” ಎಂದು ರೈತ ಮುಖಂಡ ಬೂಟಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ, ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಪ್ರಸ್ತಾಪಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ರೈತ ಮುಖಂಡರಿಗೆ ಮನವಿ ಮಾಡಿದ್ದಾರೆ.

Comments are closed.