ರಾಷ್ಟ್ರೀಯ

ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ ದೆಹಲಿ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಿದ ಪೊಲೀಸರು

Pinterest LinkedIn Tumblr


ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯ ಗಡಿಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ 16 ದಿನಗಳಿಂದ ದೆಹಲಿಯ ಗಡಿ ಭಾಗಗಳಲ್ಲಿ ಹೋರಾಟ ನಡೆಸುತ್ತಿರುವ ಸಾವಿರಾರು ರೈತರು, ಇತ್ತೀಚೆಗೆ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ವಿವಿಧ ಹಂತಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುವ ಜತೆಗೆ, ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಧರಣಿಯಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾ ಗದಂತೆ ಕ್ರಮ ಕೈಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಪ್ರಮುಖ ಗಡಿಭಾಗಗಳಲ್ಲಿ ದೆಹಲಿ ಸಂಚಾರಿ ಪೊಲೀಸ್ ವಿಭಾಗ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿದೆ. ಕ್ಷಣ ಕ್ಷಣದ ಮಾಹಿತಿಯನ್ನು ಇಲಾಖೆಯ ಟ್ವಿಟ್ಟರ್‌ ಖಾತೆಯಲ್ಲಿ ಅಪ್‌ಲೋಡ್‌ ಮಾಡಲಾಗುತ್ತಿದೆ.

Comments are closed.