ರಾಷ್ಟ್ರೀಯ

ಸಂಸತ್ ಮೇಲಿನ ದಾಳಿಗೆ 19 ವರ್ಷ: ಇದು ಹೇಡಿತನದ ಕೃತ್ಯ- ಮೋದಿ!

Pinterest LinkedIn Tumblr


ನವದೆಹಲಿ: ಸಂಸತ್ ಮೇಲಿನ ದಾಳಿ ನಡೆದು ಬರೋಬ್ಬರಿ 19 ವರ್ಷಗಳು ಕಳೆದಿದ್ದು, 2001ರಲ್ಲಿ ಸಂಸತ್ತಿನ ಮೇಲೆ ನಡೆದ ದಾಳಿಯನ್ನು ನಾವೆಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ (ಡಿ. 13) ಹೇಳಿದ್ದಾರೆ.

ಡಿಸೆಂಬರ್ 13, 2001ರಂದು ರಾಜಧಾನಿ ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭೀಕರ ದಾಳಿ ನಡೆಸಿದ್ದರು. ದಾಳಿಯಲ್ಲಿ 8 ಮಂದಿ ಭದ್ರತಾ ಪಡೆ ಸಿಬ್ಬಂದಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದರು. ದಾಳಿ ನಡೆಸಿದ ಎಲ್ಲಾ 5 ಉಗ್ರರನ್ನು ಕೂಡ ಭದ್ರತಾಪಡೆಗಳು ಹತ್ಯೆಗೈದಿದ್ದವು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 2001ರಲ್ಲಿ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತನ್ನು ರಕ್ಷಿಸುವ ಸಲುವಾಗಿ ಪ್ರಾಣ ಕಳೆದುಕೊಂಡವರ ಶೌರ್ಯ ಮತ್ತು ತ್ಯಾಗವನ್ನು ನಾವು ನೆನೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ ನಡುವೆ ಭಾರೀ ಉದ್ವಿಗ್ನತೆಗೆ ಕಾರಣವಾಗಿತ್ತು. ಮತ್ತು ನಂತರದಲ್ಲಿ ಸಂಸತ್ತಿನ ಭದ್ರತೆಯಲ್ಲಿ ಭಾರಿ ಸುಧಾರಣೆಗೂ ಕಾರಣವಾಗಿತ್ತು.

Comments are closed.