
ತಿರುವನಂತಪುರಂ: ರಾಜ್ಯದ ಎಲ್ಲರಿಗೂ ಕೊರೋನಾ ಲಸಿಕೆ ಉಚಿತವಾಗಿ ವಿತರಿಸಲಾಗುವುದು ಎಂದು ಘೋಷಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ರಾಜ್ಯ ಚುನಾವಣಾ ಆಯೋಗ ವಿವರಣೆ ಕೋರಿದೆ.
ಕಳೆದ ಶನಿವಾರ ಮೂರನೇ ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಕ್ತಾಯಗೊಳ್ಳುವ ಮುನ್ನವೇ ಸಿಎಂ ವಿಜಯನ್ ಅವರು ಉಚಿತ ಕೊರೋನಾ ಲಸಿಕೆ ವಿತರಿಸುವುದಾಗಿ ಘೋಷಣೆ ಮಾಡಿದ್ದರು.
ಮಲಪ್ಪುರಂ, ಕೊಝಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೋಮವಾರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಿತು.
ಮುಖ್ಯಮಂತ್ರಿಗಳಿಗೆ ಈ ವಿಷಯದ ಬಗ್ಗೆ ಮತ್ತು ಅವರು ಅಂತಹ ಘೋಷಣೆ ಮಾಡಿದ ಸಂದರ್ಭಗಳ ಬಗ್ಗೆ ವಿವರಣೆ ಕೋರಿ ರಾಜ್ಯ ಚುನಾವಣಾ ಆಯೋಗ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.
ತಮಿಳುನಾಡು ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿವೆ. ಇತ್ತೀಚಿಗೆ ಕೇರಳ ಸಹ ಉಚಿತವಾಗಿ ಲಸಿಕೆ ನೀಡುವುದಾಗಿ ಹೇಳಿತ್ತು.
Comments are closed.