ರಾಷ್ಟ್ರೀಯ

ಡಿ. 18 ರಿಂದ 10 ಹಾಗೂ 12 ತರಗತಿಗೆ ಶಾಲೆಗಳು ಪುನರಾರಂಭ

Pinterest LinkedIn Tumblr


ಭೋಪಾಲ್: ಡಿಸೆಂಬರ್ 18 ರಿಂದ 10 ಹಾಗೂ 12 ತರಗತಿಗಳಿಗೆ ಪೂರ್ಣ ಪ್ರಮಾಣದ ನಿಯಮಿತ ತರಗತಿಗಳನ್ನು ನಡೆಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಶಾಲಾ ಪ್ರಾಂಶುಪಾಲರೊಂದಿಗೆ ಚರ್ಚಿಸಿದ ನಂತರ ಮತ್ತು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಬೋಧನಾ ಸಿಬ್ಬಂದಿಯ ಲಭ್ಯತೆಯ ಆಧಾರದ ಮೇಲೆ 9ನೇ ತರಗತಿ ಮತ್ತು 11 ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇತ್ತೀಚಿಗೆ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ದೇಶನಗಳನ್ನು ನೀಡಲಾಗಿದ್ದು, ಇಂದು ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.

“ವಿದ್ಯಾರ್ಥಿಗಳ ಹಾಜರಾತಿ ಪೋಷಕರು ಅಥವಾ ಪಾಲಕರ ಒಪ್ಪಿಗೆಯ ಮೇಲೆ ಅವಲಂಬಿತವಾಗಿರುತ್ತದೆ. ಅವರು ನೀಡಿದ ಒಪ್ಪಿಗೆ ಈ ಶೈಕ್ಷಣಿಕ ವರ್ಷಕ್ಕೆ ಮಾನ್ಯವಾಗಿರುತ್ತದೆ. ಆದಾಗ್ಯೂ, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ. ಆನ್‌ಲೈನ್ ಮೂಲಕ ಅಧ್ಯಯನ ಮಾಡಲು ಬಯಸುವವರಿಗೆ ಅದಕ್ಕೂ ಅನುಮತಿಸಲಾಗುತ್ತದೆ” ಅಧಿಕಾರಿ ಹೇಳಿದ್ದಾರೆ.

Comments are closed.