ಗುಜರಾತ್ ನ ರಾಜಧಾನಿ ಅಹಮದಾಬಾದ್ ನಲ್ಲಿ ನಿಗೂಢ ಸೋಂಕು ಕಾಣಿಸಿಕೊಂಡಿದ್ದು, 44 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ.
ಕೋವಿಡ್-19 ಸೋಂಕಿಗೆ ಇಡೀ ಜಗತ್ತು ತತ್ತರಿಸಿದೆ. ಇದರ ನಡುವೆ ತೆಲಂಗಾಣದಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ನಿಗೂಢ ಸೋಂಕಿನಿಂದ 600ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆತಂಕ ಸೃಷ್ಟಿಸಿತ್ತು. ಇದೀಗ ಅಹಮದಾಬಾದ್ ನಲ್ಲಿ ವಿಚಿತ್ರ ಸೋಂಕು ಆತಂಕ ಹೆಚ್ಚಿಸಿದೆ.
ಚಳಿಗಾಲದ ಹಿನ್ನೆಲೆಯಲ್ಲಿ ಈ ಸೋಂಕು ವೇಗವಾಗಿ ಹರಡುತ್ತಿದ್ದು, ಮೂಗು ಹಾಗೂ ಕಣ್ಣಿನ ಮೂಲಕ ಸೋಂಕು ಹರಡುತ್ತಿದ್ದು, ಸೋಂಕು ಪ್ರಮಾಣ ದೇಹದಲ್ಲಿ ಹೆಚ್ಚಾದಂತೆ ಮಾಂಸಖಂಡ ಹಾಗೂ ನರಗಳ ಮೇಲೆ ಪ್ರಭಾವ ಬೀರಿ ಪಾರ್ಶ್ವವಾಯುಗೆ ಕಾರಣವಾಗುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ. ತಡವಾದರೆ ಜೀವಕ್ಕೆ ಆಪಾಯ ಎಂದು ವೈದ್ಯರು ಹೇಳಿದ್ದಾರೆ.
ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಇದೆ.