ರಾಷ್ಟ್ರೀಯ

ದೆಹಲಿಯಲ್ಲಿ ಅಧಿಕ ಜಲ ನಿರೋಧಕ ಟೆಂಟ್ ವ್ಯವಸ್ಥೆ ಮಾಡಿಕೊಳ್ಳುತ್ತಿರುವ ಪ್ರತಿಭಟನಾನಿರತ ರೈತರು!

Pinterest LinkedIn Tumblr

ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ರೈತರು, ಶೀತ ವಾತಾವರಣ ಪರಿಸ್ಥಿತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಜಲ ನಿರೋಧಕ ಟೆಂಟ್ ಗಳ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೂ ಹೋರಾಟವನ್ನು ಮುಂದುವರೆಸಬೇಕಾದ್ದರಿಂದ ಇಲ್ಲಿಯೇ ಉಳಿಯಲು ಹೆಚ್ಚಿನ ಟೆಂಟ್ ಗಳ ವ್ಯವಸ್ಥೆ ಮಾಡಿಕೊಳ್ಳುತ್ತಿರುವುದಾಗಿ ಪ್ರತಿಭಟನಾಕಾರರೊಬ್ಬರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರೈತರ ಜೊತೆಗೆ ಮಾತುಕತೆ ನಡೆಸಿ, ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು, ಈ ಕಾನೂನುಗಳ ವಿರುದ್ಧ ನಮ್ಮ ಹೋರಾಟವನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ಪಂಜಾಬಿನ ಕಿಶಾನ್ ಮಜ್ದೂರ್ ಸಂಘರ್ಷ ಸಮಿತಿಯ ದಯಾಳ್ ಸಿಂಗ್ ಹೇಳಿದ್ದಾರೆ.

ಕೊರೆಯುವ ಚಳಿಯ ನಡುವೆಯೂ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಪ್ರತಿಭಟನೆ ಮಾಡುತ್ತಿದ್ದು, ಶೀತದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಉದ್ದನೆಯ ಟೆಂಟ್ ಗಳ ನಿರ್ಮಾಣ ಕಾರ್ಯದ ಸಿದ್ಧತೆ ನಡೆಯುತ್ತಿದೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರೈತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರೈತರಿಗೆ ಬಹಿರಂಗ ಪತ್ರ ಬರೆದಿರುವ ನರೇಂದ್ರ ಸಿಂಗ್ ತೋಮರ್ ಅವರನ್ನು ಹೊಗಳಿರುವ ಪ್ರಧಾನಿ, ರೈತರು ಈ ಪತ್ರವನ್ನು ಓದುವಂತೆ ಮನವಿ ಮಾಡಿದ್ದಾರೆ.

Comments are closed.