ರಾಷ್ಟ್ರೀಯ

ಅಸ್ಸಾಂ: 20 ಸಿಲಿಂಡರ್ ಸ್ಫೋಟಕ್ಕೆ 66 ಗುಡಿಸಲುಗಳು ಭಸ್ಮ

Pinterest LinkedIn Tumblr


ಗುವಾಹತಿ: ಅಸ್ಸಾಂನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 20 ಅನಿಲ ಸಿಲಿಂಡರ್ ಗಳು ಸ್ಫೋಟವಾಗಿ ಬರೊಬ್ಬರಿ 66 ಗುಡಿಸಲುಗಳು ಸುಟ್ಟು ಕರಕಲಾಗಿವೆ.

ಗುವಾಹತಿಯ ಜಲುಕ್‌ ಬರಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಒಂದು ಗುಡಿಸಲಿನ್ಲಲಿ ಬೆಂಕಿ ಕಾಣಿಸಿಕೊಂಡ ನಂತರ ಅದು ಇತರೆ ಗುಡಿಸಲುಗಳಿಗೆ ಹರಡಿದೆ. ಈ ವೇಳೆ ಮನೆಗಳಲ್ಲಿ ಇರಿಸಲಾಗಿದ್ದ ಎಲ್‌ಪಿಜಿ ಸಿಲಿಂಡರ್‌ಗಳು ಒಂದರ ಬಳಿಕ ಒಂದರಂತೆ ಸ್ಫೋಟಗೊಂಡಿದ್ದು, ಒಟ್ಟು 20 ಸಿಲಿಂಡರ್ ಗಳು ಸ್ಫೋಟಗೊಂಡಿದ್ದು, ಇದೇ ವೇಳೆ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ.

ಅಸ್ಸಾಂನ ಗುವಾಹಟಿಯಲ್ಲಿ ಶನಿವಾರ ಸುಮಾರು 20 ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರಸ್ತುತ 14 ಅಗ್ನಿ ಶಾಮಕ ವಾಹನಗಳು ಸುಮಾರು ಮೂರು ಗಂಟೆಗಳ ನಿರಂತರ ಶ್ರಮಿಸಿ ಬೆಂಕಿ ನಂದಿಸಿವೆ.

Comments are closed.