ರಾಷ್ಟ್ರೀಯ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ: ರೈತರೊಂದಿಗೆ ಮೋದಿ ಸಂವಾದ

Pinterest LinkedIn Tumblr


ಹೊಸದಿಲ್ಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಹೊಸ ಕಂತನ್ನು ಪಿಎಂ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಿದರು, ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಏಳನೇ ಕಂತು ಇದಾಗಿದ್ದು, 18000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.

ಆರು ರಾಜ್ಯಗಳ ಕೃಷಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸುತ್ತಿದ್ದಾರೆ. ಕೇಂದ್ರ ಕೃಷಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ವರ್ಚುವಲ್ ಕಾರ್ಯಕ್ರಮ ನಡೆಯುತ್ತಿದೆ.

ದೇಶದ 9 ಕೋಟಿ ಫಲಾನುಭವಿ ರೈತ ಕುಟುಂಬಗಳಿಗೆ ತಲಾ 2 ಸಾವಿರ ರೂಪಾಯಿಯಂತೆ 18 ಸಾವಿರ ಕೋಟಿ ರೂ.ಗೂ ಹೆಚ್ಚು ಹಣವನ್ನು ವರ್ಗಾಯಿಸಲಾಗುತ್ತದೆ. ಈ ಪೈಕಿ ಇಂದು ರಾಜ್ಯದ 53,01,252 ರೈತರ ಖಾತೆಗೆ ಹಣ ಜಮೆಯಾಗಲಿದೆ.

ರಾಜ್ಯದ ಬಂಗಾರಪೇಟೆಯ ರೈತ ವಿ.ಚಂದ್ರಪ್ಪ ಸೇರಿದಂತೆ 6 ರಾಜ್ಯಗಳ ರೈತರ ಜತೆಗೆ ಪ್ರಧಾನಿ ಸಮಾಲೋಚನೆ ನಡೆಸುತ್ತಿದ್ದಾರೆ. ಕೇಂದ್ರದ ಮೂರು ರೈತ ಕಾಯ್ದೆ ಗಳಿಗೆ ಪ್ರತಿರೋಧ ಉಂಟಾಗಿರುವಂತೆಯೇ ಈ ಕಾರ್ಯಕ್ರಮ ನಡೆಯುತ್ತಿರುವುದು ಗಮನಾರ್ಹವಾಗಿದೆ.

Comments are closed.