ರಾಷ್ಟ್ರೀಯ

ಹೊಸತೊಂದು ದಾಖಲೆ ನಿರ್ಮಿಸಿದ ಏರ್‌ ಇಂಡಿಯಾದ ನಾಲ್ವರು ಮಹಿಳಾ ಪೈಲಟ್‌ಗಳು !

Pinterest LinkedIn Tumblr

ಬೆಂಗಳೂರು: ಮಹಿಳೆಯರು ತಾವು ಪುರುಷರಿಗಿಂತ ಕಮ್ಮಿ ಇಲ್ಲ ಎಂಬುದನ್ನು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ತೋರಿಸುತ್ತಿದ್ದು, ಇದೀಗ ನಾಲ್ವರು ಮಹಿಳಾ ಪೈಲಟ್‌ಗಳು ವಿಮಾನ ಹಾರಾಟ ಮಾಡುವ ಮೂಲಕ ಮತ್ತೊಂದು ಇತಿಹಾಸ ಬರೆದಿದ್ದಾರೆ.

ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ಪೈಲಟ್‌ಗಳಾಗಿರುವ ಕ್ಯಾಪ್ಟನ್ ಜೋಯಾ ಅಗರ್‌ವಾಲ್‌, ಕ್ಯಾಪ್ಟನ್ ಪಾಪಗರಿ ತನ್ಮೈ, ಕ್ಯಾಪ್ಟನ್ ಆಕಾಶಾ ಸೋನಾವೇರ್ ಮತ್ತು ಕ್ಯಾಪ್ಟನ್ ಶಿವಾನಿ ಮನ್ಹಾಸ್ ಅವರನ್ನೊಳಗೊಂಡ ತಂಡವು ಹೊಸ ದಾಖಲೆ ನಿರ್ಮಿಸಿದೆ.

ಸ್ಯಾನ್‌ ಫ್ರಾನ್ಸಿಸ್ಕೊ- ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣವಾಗಿ ನಿರ್ವಹಿಸುವ ಮೂಲಕ ಹೊಸ ಇತಿಹಾಸ ದಾಖಲಿಸಿದ್ದಾರೆ. ಸ್ಯಾನ್‌ ಫ್ರಾನ್ಸಿಸ್ಕೊ – ಬೆಂಗಳೂರು ನಡುವಿನ ಮಾರ್ಗವು ವಿಶ್ವದ ಅತ್ಯಂತ ದೀರ್ಘ ವಾಯು ಮಾರ್ಗವಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಿಮಾನಗಳು ಭೂಮಿಯ ಮೇಲಿನ ದುರ್ಗಮ ಪ್ರದೇಶ ಎನ್ನುವ ಉತ್ತರ ಧ್ರುವವನ್ನು ದಾಟಿ ಬರುತ್ತವೆ.

ಮಹಿಳಾ ಪೈಲಟ್‌ಗಳ ನಿರ್ವಹಣೆಯ ವಿಮಾನವು ಉತ್ತರ ಧ್ರುವದ ಮೇಲೆ ಹಾರಿ, ಅಟ್ಲಾಂಟಿಕ್ ಮಾರ್ಗದ ಮೂಲಕ, 16,000 ಕಿ.ಮೀ ದೂರವನ್ನು ಕ್ರಮಿಸಿ ಬೆಂಗಳೂರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಶನಿವಾರ ರಾತ್ರಿ 8.30ಕ್ಕೆ (ಸ್ಥಳೀಯ ಸಮಯ) ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೊದಿಂದ ಹೊರಟ ಎಐ 176 ವಿಮಾನ, , ಸೋಮವಾರ (ಸ್ಥಳೀಯ ಸಮಯ) ಮುಂಜಾನೆ 4ಗಂಟೆ ಸುಮಾರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು.

Comments are closed.