ರಾಷ್ಟ್ರೀಯ

72ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌

Pinterest LinkedIn Tumblr

ನವದೆಹಲಿ: 72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು ಸೇರಿದಂತೆ ಸಿಡಿಎಸ್ ರಾವತ್ ಪಾಲ್ಗೊಂಡಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್​ಪಥ್‌ನಲ್ಲಿ ಪರೇಡ್ ಆರಂಭವಾಗಿದೆ. ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಪುರಸ್ಕೃತರಿಂದ ಪರೇಡ್ ನಡೆಯುತ್ತಿದೆ.

ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ಸೇನೆಯು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದೆ.

ದೆಹಲಿಯಲ್ಲಿ ಇಂದು 72ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆಯುತ್ತಿದ್ದು, ದಟ್ಟ ಮಂಜು ಕವಿದ ವಾತಾವರಣವಿದ್ದರಿಂದ ದ್ವಜಾರೋಹಣವನ್ನು ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಯಿತು.

ದೆಹಲಿಯ ರಾಜಪಥ್​​ನಲ್ಲಿ ಗಣರಾಜ್ಯೋತ್ಸವ ಪರೇಡ್​ ಆರಂಭವಾಗಿದೆ. ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದೇಶಿ ಅತಿಥಿ ಭಾಗಿಯಾಗ್ತಿಲ್ಲ. ಜೊತೆಗೆ ಬಾಂಗ್ಲಾದೇಶ ವಿಮೋಚನೆಯ 50ನೇ ವರ್ಷದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ನಲ್ಲಿ ಬಾಂಗ್ಲಾದೇಶದ ಸೇನಾ ತುಕಡಿ ಭಾಗಿಯಾಗಲಿದೆ.

Comments are closed.