ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ದೆಹಲಿ ಪೊಲೀಸರು ಸಲ್ಲಿಸಿರುವ ಎಫ್‌ಐಆರ್‌ನಲ್ಲಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ವಕ್ತಾರ ರಾಕೇಶ್ ಟಿಕೈಟ್ ಸೇರಿದಂತೆ ಪ್ರಮುಖ ರೈತ ಸಂಘಟನೆಯ ಮುಖ್ಯಸ್ಥರ ಹೆಸರನ್ನು ಉಲ್ಲಂಖಿಸಿದ್ದಾರೆ.
ರ್ಯಾಲಿಗೆ ಸಂಬಂಧಿಸಿದಂತೆ ನೀಡಲಾದ ಆಕ್ಷೇಪಣೆ ಇಲ್ಲದಿರುವ ಪ್ರಮಾಣ ಪತ್ರ(ಎನ್‌ಒಸಿ) ಉಲ್ಲಂಘನೆಗಾಗಿ ಎಫ್‌ಐಆರ್ ದಾಖಲಿಸಲಾಗಿದೆ. ರೈತರ ಟ್ರಾಕ್ಟರ್ ರ್ಯಾಲಿಗೆ ಸಂಬಂಧಿಸಿದಂತೆ ಹೊರಡಿಸಿದ ಎನ್‌ಒಸಿ ಉಲ್ಲಂಘನೆಗಾಗಿ ರೈತ ಮುಖಂಡರಾದ ದರ್ಶನ್ ಪಾಲ್, ರಾಜಿಂದರ್ ಸಿಂಗ್, ಬಲ್ಬೀರ್ ಸಿಂಗ್ ರಾಜೇವಾಲ್, ಬುಟಾ ಸಿಂಗ್ ಬುರ್ಜ್‌ಗಿಲ್, ಜೋಗಿಂದರ್ ಸಿಂಗ್ ಉಗ್ರಾಹಾ ಮತ್ತು ಬಿಕು ವಕ್ತಾರ ರಾಕೇಶ್ ಟಿಕೈಟ್ ಅವರ ಹೆಸರನ್ನು ಎಫ್‌ಐಆರ್ ಉಲ್ಲೇಖಿಸಿದೆ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.
ದೆಹಲಿಗೆ ಪ್ರವೇಶಿಸಲು ರೈತರು ಬ್ಯಾರಿಕೇಡ್‌ಗಳನ್ನು ಮುರಿದು ರಾಷ್ಟ್ರದ ರಾಜಧಾನಿಯ ಹಲವಾರು ಭಾಗಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಿದ್ದಾರೆ. ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಆಯೋಜಿಸಲಾಗಿದ್ದ ಟ್ರಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಸಂಭವಿಸಿದೆ. ಗಲಭೆಕೋರರು ಹಲವಾರು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳು ಹಾನಿಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರದ ವೇಳೆ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 22 ಎಫ್‌ಐಆರ್ ದಾಖಲಿಸಲಾಗಿದೆ.
ಹೊಸದಾಗಿ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆ ವಿರುದ್ಧ ರೈತರು ನವೆಂಬರ್ 26ರಿಂದ ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ(ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ 2020; ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ(ರೈತ ಸಬಲೀಕರಣ ಮತ್ತು ಸಂರಕ್ಷಣೆ) ಕಾಯ್ದೆ 2020 ಮತ್ತು ಅಗತ್ಯ ಸರಕುಗಳ(ತಿದ್ದುಪಡಿ) ಕಾಯ್ದೆ 2020ರ ಒಪ್ಪಂದ.