ರಾಷ್ಟ್ರೀಯ

ಎಲ್ಲಾ ರಾಜ್ಯಗಳಲ್ಲಿ ಕನಿಷ್ಠ ಒಂದು ಮೆಡಿಕಲ್, ತಾಂತ್ರಿಕ ಕಾಲೇಜು ಸ್ಥಳೀಯ ಭಾಷೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆ: ಮೋದಿ

Pinterest LinkedIn Tumblr

ಸೋನಿತ್‌ಪುರ್: ದೇಶದ ಈಶಾನ್ಯ ರಾಜ್ಯದ ಹೆಬ್ಬಾಗಿಲಾಗಿರುವ ಅಸ್ಸಾಂ ರಾಜ್ಯ ಇದೀಗ ವಿಶ್ವಾಸ ಮತ್ತು ವಿಕಾಸದ ಪಥದಲ್ಲಿ ಅತ್ಯಂತ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಲ್ಲಿನ ಸೋನಿತ್‌ಪುರ್ ಜಿಲ್ಲೆಯಲ್ಲಿ ಬೃಹತ್ ಸಾವರ್ಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಐದು ವರ್ಷಗಳಲ್ಲಿ ಅಭಿವೃದ್ಧಿ ದೃಷ್ಟಿಯಲ್ಲಿ ಅಸ್ಸಾಂ ತನ್ನ ಚಹರೆಯನ್ನು ಬದಲಿಸಿಕೊಂಡಿದೆ. ರಾಜ್ಯದ ಮೆಡಿಕಲ್ ಕಾಲೇಜುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿದ್ದು, ಇನ್ನು ಮುಂದೆ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಸಿಗಲಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ದೇಶದ ಎಲ್ಲಾ ರಾಜ್ಯಗಳಲ್ಲಿ ಕನಿಷ್ಠ ಒಂದು ಮೆಡಿಕಲ್ ಕಾಲೇಜು ಹಾಗೂ ಕನಿಷ್ಠ ಒಂದು ತಾಂತ್ರಿಕ ಕಾಲೇಜು ಸ್ಥಳೀಯ ಭಾಷೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಇದಕ್ಕೆ ಅಸ್ಸಾಂ ರಾಜ್ಯದಲ್ಲಿ ಮುಂದಡಿ ಇಡಲಾಗುವುದು ಎಂದು ಪ್ರಧಾನಿ ಮೋದಿ ಈ ವೇಳೆ ಘೋಷಿಸಿದರು. ಇದು ತಮ್ಮ ಕನಸಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಹಿಂದಿನ ಸರ್ಕಾರಗಳು ದೇಶದ ಪೂರ್ವೋತ್ತರ ರಾಜ್ಯಗಳ ಬಗ್ಗೆ ತಳೆದ ಉದಾಸೀನ ನಿಲುವುನಿಂದಾಗಿ ಅಭಿವೃದ್ಧಿ ಇಲ್ಲಿ ಮರೀಚಿಕೆಯಾಗಿತ್ತು. ಅದರೆ ಕೇಂದ್ರದಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೂರವೋತ್ತರ ರಾಜ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೇಂದ್ರದ ಯೋಜನೆಗಳು ಹಾಗೂ ಅಸ್ಸಾಂ ರಾಜ್ಯ ಸರ್ಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು, ದೇಶದ ಅಭಿವೃಧ್ಧಿ ಪಥದಲ್ಲಿ ಅಸ್ಸಾಂ ಕೂಡ ಇತರ ರಾಜ್ಯಗಳೊಂದಿಗೆ ಸಮಾನವಾಗಿ ಮುನ್ನುಗ್ಗುತ್ತಿದೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು.

ಇದಕ್ಕೂ ಮೊದಲ ಪ್ರಧಾನಿ ಮೋದಿ ಅಸೋಂ ಮಾಲಾ ಯೋಜನೆ ಹಾಗೂ ಎರಡು ಪ್ರತ್ಯೇಕ ಮೆಡಿಕಲ್ ಕಾಲೇಜುಗಳ ಶಂಕುಸ್ಥಾಪನೆ ನೆರವೇರಿಸಿದರು.

ಪ್ರಧಾನಿ ಮೋದಿ ಅಸ್ಸಾಂ ಪ್ರವಾದ ಬಳಿಕ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದು, ಅಲ್ಲಿಯೂ ಬೃಹತ್ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

Comments are closed.