ರಾಷ್ಟ್ರೀಯ

ಮಹಾರಾಷ್ಚ್ರ, ಕೇರಳ, ಪಂಜಾಬ್ ಸೇರಿದಂತೆ ಐದು ರಾಜ್ಯಗಳಿಂದ ದೆಹಲಿಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

Pinterest LinkedIn Tumblr

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ದೆಹಲಿ ಸರ್ಕಾರ ಗಂಭೀರ ಕ್ರಮಕ್ಕೆ ಮುಂದಾಗಿದೆ.

ಮಹಾರಾಷ್ಚ್ರ, ಕೇರಳ ಮತ್ತು ಪಂಜಾಬ್ ನಲ್ಲಿ ಕೋವಿಡ್ ಸೋಂಕಿತಕ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಇತ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಐದು ರಾಜ್ಯಗಳಿಂದ ದೆಹಲಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.

ಈ ಐದು ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಚ್ರ, ಕೇರಳ ಮತ್ತು ಪಂಜಾಬ್ ರಾಜ್ಯಗಳು ಸೇರಿದ್ದು, ಇದಲ್ಲದೆ ಛತ್ತೀಸ್ ಘಡ ಮತ್ತು ಮಧ್ಯ ಪ್ರದೇಶದಿಂದ ಬರುವವರಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಮುಂದಿನ ಮಾರ್ಚ್ 15ರವರೆಗೂ ಈ ನಿಯಮ ಕಡ್ಡಾಯವಾಗಿರಲಿದೆ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ದೊಂದಿಗಿನ ಸಭೆ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ಹಿಂದೆ 4 ಸಾವಿರ ಗಡಿಯಲ್ಲಿದ್ದ ಪ್ರತಿನಿತ್ಯ ಹೊಸ ಸೋಂಕಿತರ ಸಂಖ್ಯೆ ಇದೀಗ ನಿತ್ಯ 7 ಸಾವಿರ ಗಡಿ ಸಮೀಪವಿದೆ. ಅಂತೆಯೇ ಕೇರಳದಲ್ಲೂ ನಿಧಾನಗತಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು. ಕೇರಳ ಮಾತ್ರವಲ್ಲದೇ ಛತ್ತೀಸ್ ಘಡ ಮತ್ತು ಮಧ್ಯಪ್ರದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.

Comments are closed.