
ನವದೆಹಲಿ: ದೇಶದಲ್ಲಿ ಮಾರ್ಚ್ ಒಂದರಿಂದ ಎರಡನೇ ಹಂತದ ಕೊರೋನೋ ಲಸಿಕೆ ಹಾಕುವ ಅಭಿಯಾನ ಕೈಗೆತ್ತಿಕೊಳ್ಳಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ.
45 ವರ್ಷ ದಾಟಿದ ಅನಾರೋಗ್ಯಪೀಡಿತರು ಮತ್ತು 60 ವರ್ಷ ದಾಟಿದ ಎಲ್ಲಾ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಹಾಕಲು ನಿರ್ಧರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಿರ್ಧಾರಗಳನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ್ದಾರೆ
ಮಾರ್ಚ್ 1ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೋನೊ ಲಸಿಕೆಯನ್ನು ಉಚಿತವಾಗಿ ಹಾಕಲಿದ್ದು ಖಾಸಗೀ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ದರ ನಿಗದಿಪಡಿಸಲಾಗಿದೆ. ಲಸಿಕೆ ಪಡೆಯಲು ಬಯಸುವ ಮಂದಿ ಸರ್ಕಾರಿ ಅಥವಾ ಖಾಸಗೀ ಆಸ್ಪತ್ರೆ ಎರಡರಲ್ಲಿ ಯಾವುದು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಮಾರ್ಚ್ 1ರಿಂದ ಎರಡನೇ ಹಂತದ ಲಸಿಕೆ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸದ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತದೆ ಮುಂದೆ ದರ ನಿಗಧಿ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವರಿಗೆ ಲಸಿಕೆ ಹಾಕಲು ಎಷ್ಟು ದರ ನಿಗಧಿ ಮಾಡಬೇಕು ಎನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಒಂದು ಕೋಟಿಗೂ ಅಧಿಕ ಮಂದಿಗೆ ಲಸಿಕೆ…
ಜನವರಿ 16 ರಿಂದ ಆರಂಭವಾದ ಮೊದಲ ಹಂತದ ಲಸಿಕಾ ಅಭಿಯಾನದಲ್ಲಿ ಇದುವರೆಗೂ 1.10 ಕೋಟಿಗೂ ಕ್ಕೂ ಹೆಚ್ಚಿನ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎರಡು ಕೋಟಿ ಆರೋಗ್ಯ ಕಾರ್ಯಕರ್ತರು ಒಂದು ಕೋಟಿ ಮಂಜೂರು ಕಾರ್ಯಪಡೆಯ ಸಿಬ್ಬಂದಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕುವ ಪ್ರಗತಿಯಲ್ಲಿದೆ ನಡುವೆ ಎರಡನೇ ಹಂತದ ಲಸಿಕೆ ಹಾಕುವ ಕಾರ್ಯಕ್ಕೆ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದು ಅವರು ಹೇಳಿದರು
Comments are closed.