ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣಕ್ಕೆ 2,500 ಕೋಟಿ ರೂ.ದೇಣಿಗೆ ಸಂಗ್ರಹ; 3 ವರ್ಷದಲ್ಲಿ ರಾಮ ಮಂದಿರ ನಿರ್ಮಾಣ ಪೂರ್ಣ

Pinterest LinkedIn Tumblr

ನವದೆಹಲಿ: ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ 9 ಲಕ್ಷ ಸ್ವಯಂಸೇವಕರು ನಾಲ್ಕು ಲಕ್ಷ ಹಳ್ಳಿಗಳ 10 ಕೋಟಿ ಮನೆಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ ಎಂದು ಚಂಪತ್ ರೈ ಹೇಳಿದ್ದಾರೆ.

ಅಯೋಧ್ಯೆಯಲ್ಲಿ 70 ಎಕರೆಯಲ್ಲಿ ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ಮುಂದಾಗಿತ್ತು. ಆದರೆ ಇದೀಗ ಹೆಚ್ಚುವರಿಯಾಗಿ ಜಮೀನನ್ನು ಖರೀದಿಸಿ 107 ಎಕರೆಗೆ ವಿಸ್ತರಿಸಲು ಟ್ರಸ್ಟ್ ಯೋಜನೆ ರೂಪಿಸಿದೆ. ಅದಕ್ಕಾಗಿ ಸ್ಥಳೀಯ ನಿವಾಸಿಗಳ ಜಮೀನನ್ನು ಖರೀದಿಸಲಾಗುತ್ತಿದೆ ಎಂದರು.

Comments are closed.