ರಾಷ್ಟ್ರೀಯ

ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ: ರೈಲ್ವೆ ಸಚಿವ ಪಿಯೂಷ್ ಗೋಯಲ್

Pinterest LinkedIn Tumblr

ನವದೆಹಲಿ: ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ರೈಲ್ವೆಗಾಗಿ ಬಿಡುಗಡೆಯಾದ ಅನುದಾನ ಕುರಿತು ಎಂಬ ಸದಸ್ಯರು ಕೇಳಿದ ಪ್ರಶ್ನೆಗೆ ಚರ್ಚೆವೇಳೆ ಉತ್ತರಿಸಿದ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು, ಪ್ರಧಾನಿ ಮೋದಿ ಸರ್ಕಾರ ರೈಲ್ವೆ ಹೂಡಿಕೆಯನ್ನು ಹೆಚ್ಚಿಸಿದೆ. 2019-20ರ ಆರ್ಥಿಕ ವರ್ಷದಲ್ಲಿ 1.5 ಲಕ್ಷ ಕೋಟಿ ಇದ್ದ ಹೂಡಿಕೆ 2021-22ರ ಹಣಕಾಸು ವರ್ಷದಲ್ಲಿ 2.15 ಲಕ್ಷ ಕೋಟಿಗೆ ಹೆಚ್ಚಿಸಿದೆ ಎಂದು ಹೇಳಿದರು.

ಅಂತೆಯೇ ಭಾರತೀಯ ರೈಲ್ವೇ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ರೈಲ್ವೆ ಅಪಘಾತದಿಂದಾಗಿ ಯಾವುದೇ ಪ್ರಯಾಣಿಕರ ಸಾವು ಸಂಭವಿಸಿಲ್ಲ ಎಂದು ಹೇಳಿದರು. ಅಂತೆಯೇ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಖಾಸಗಿ ಹೂಡಿಕೆಗೆ ಉತ್ತೇಜನ ನೀಡಬೇಕು ಎಂದು ಪಿಯೂಷ್ ಗೋಯಲ್ ಹೇಳಿದರು.

ಸಾರ್ವಜನಿಕ ಮತ್ತು ಖಾಸಗಿ ವಲಯಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ದೇಶವು ಹೆಚ್ಚಿನ ಬೆಳವಣಿಗೆಯತ್ತ ಸಾಗಬಹುದು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು. ಆದರೆ ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯನ ಆಸ್ತಿಯಾಗಿದೆ.. ಹಾಗೆಯೇ ಉಳಿಯುತ್ತದೆ ಎಂದು ಸಚಿವರು ಹೇಳಿದರು.

Comments are closed.