ರಾಷ್ಟ್ರೀಯ

ದೇಶದಲ್ಲಿ 1.60 ಲಕ್ಷ ದಾಟಿದ ಕೋವಿಡ್ ಸೋಂಕು; 879 ಮಂದಿ ಸಾವು

Pinterest LinkedIn Tumblr

ನವದೆಹಲಿ: ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ 1.60 ಲಕ್ಷ ದಾಟಿದ್ದು, 879 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,61,736 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 879 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 97,168 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಚೇತರಿಕೆಯಾದವರ ಸಂಖ್ಯೆ 1,22,53,697ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 879 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,71,058ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 12,64,698 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,00,122 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 25,92,07,108 ಕೋವಿಡ್ ಪರೀಕ್ಷೆಗಳನ್ನು ನಡೆಸಿದಂತಾಗಿದೆ. ಅಂತೆಯೇ ದೇಶದಲ್ಲಿ ಈ ವರೆಗೂ 10,85,33,085 ಡೋಸ್ ಲಸಿಕೆ ನೀಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Comments are closed.