ರಾಷ್ಟ್ರೀಯ

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಳಳವಾಗುತ್ತಿದ್ದರೂ ಲಾಕ್ಡೌನ್ ಮಾಡುವ ಯಾವ ಪ್ರಸ್ತಾವನೆಜಾರಿಯಿಲ್ಲ: ನಿರ್ಮಲಾ ಸೀತಾರಾಮನ್

Pinterest LinkedIn Tumblr

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಳಳವಾಗುತ್ತಿದ್ದರೂ ಮತ್ತೆ ದೊಡ್ಡ ಮಟ್ಟದಲ್ಲಿ ಲಾಕ್ಡೌನ್ ಮಾಡುವ ಯಾವ ಪ್ರಸ್ತಾವನೆಯಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಮಂಗಳವಾರ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಸರ್ಕಾರಕ್ಕೆ ಮತ್ತೆ ಲಾಕ್ಡೌನ್ ಮಾಡುವ ಚಿಂತನೆಯಿಲ್ಲ.ಆದರೆ ಸೋಂಕು ಪ್ರಕರಣಗಳು ಹೆಚ್ಚಿರುವ ಕಡೆಯಲ್ಲಿ ಸ್ಥಳೀಯವಾಗಿ ಕಂಟೈನ್ಮೆಂಟ್ ವಲಯ ನಿರ್ಮಾಣ ಮಾಡಿ ನಿಯಂತ್ರಣಕ್ಕೆ ಪರಿಹಾರ ಕಂಡುಕೊಳ್ಳಬಹುದು ಅಷ್ಟೆ ಎಂದರು.

ವರ್ಲ್ಡ್‌ ಬ್ಯಾಂಕ್ ಗ್ರೂಪ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ ಅವರು, ‘ದೇಶದ ಅಭಿವೃದ್ಧಿಗೆ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸುವಲ್ಲಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ತೆಗೆದುಕೊಂಡಿರುವ ಕ್ರಮಗಳನ್ನು ಶ್ಲಾಘಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿನ ತಡೆಗೆ ಟೆಸ್ಟ್‌-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ (ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, ಲಸಿಕೆ ನೀಡಿಕೆ) ಹಾಗೂ ಕೊರೊನಾ ನಿಯಮವಾವಳಿ ಸೇರಿದಂತೆ ಭಾರತ ಕೈಗೊಂಡಿರುವ ಕ್ರಮಗಳ ಕುರಿತು ಟ್ವೀಟ್ ಮೂಲಕ ವಿವರಿಸಿದ್ದಾರೆ.

‘ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿಯೂ ನಾವು ಒಂದು ವಿಷಯದ ಬಗ್ಗೆ ಸ್ಪಷ್ಟವಾಗಿದ್ದೇವೆ. ದೊಡ್ಡ ಮಟ್ಟದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ದೇಶದ ಆರ್ಥಿಕತೆ ಮೇಲೆ ಸೋಂಕು ಪರಿಣಾಮ ಬೀರಲು ಬಿಡುವುದಿಲ್ಲ. ರೋಗಿಗಳನ್ನು ಐಸೊಲೇಷನ್‌ನಲ್ಲಿಡುವುದು ಹಾಗೂ ಲಸಿಕೆ ಮೂಲಕವೇ ಕೊರೊನಾ ನಿಯಂತ್ರಣಕ್ಕೆ ಬದ್ಧವಾಗಿದ್ದೇವೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ” ಎಂದು ನಿರ್ಮಲಾ ಸೀತಾರಾಮನ್ ಹೇಳಿದರು

ವಿಡಿಯೋ ಸಂವಾದದಲ್ಲಿ, ದೇಶದಲ್ಲಿ ಕೊರೊನಾ ಲಸಿಕೆ ಉತ್ಪಾದನೆಯ ಸಾಮರ್ಥ್ಯದ ಕುರಿತು ಚರ್ಚಿಸಲಾಯಿತು. ಇದಕ್ಕೆ ವಿಶ್ವ ಬ್ಯಾಂಕ್‌ನ ಸಹಾಯವೂ ಇರುವುದಾಗಿ ಮಾಲ್ಪಾಸ್ ಭರವಸೆ ನೀಡಿದರು.

Comments are closed.