ರಾಷ್ಟ್ರೀಯ

ಭಾರತದಲ್ಲಿ ಕೊರೋನಾ ಆರ್ಭಟ; 24 ತಾಸುಗಳಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆ; 3,498 ಮಂದಿ ಸಾವು

Pinterest LinkedIn Tumblr

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಜಕಾಲಿಕ ದಾಖಲೆ ಸೃಷ್ಟಿಸಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3498 ಮಂದಿ ಸಾವನ್ನಪ್ಪಿದ್ದಾರೆ.

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,08,330ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,70,228ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,97,540 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,53,84,418ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 19,20,107 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,63,92,086 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15,22,45,179 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Comments are closed.