
ಕೊಲ್ಕತ್ತಾ: ರಾಜ್ಯ ಖಾತೆ ವಿದೇಶಾಂಗ ಸಚಿವ ವಿ ಮುರಳೀಧರನ್ ಅವರ ಬೆಂಗಾವಲು ಪಡೆ ಮೇಲೆ ದಾಳಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಇಂದು ಈ ದಾಳಿ ನಡೆದಿದೆ ಎಂದು ಸಚಿವರು ಆರೋಪಿಸಿದ್ದಾರೆ.
ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಗೂಂಡಾಗಳು ನನ್ನ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ಅವರು ಟ್ವೀಟ್ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
ಕೆಲವು ದುಷ್ಕರ್ಮಿಗಳು ಕಾರಿನ ಮೇಲೆ ದಾಳಿ ಮಾಡಿತ್ತಿರುವುದು ಕಂಡು ಬಂದಿದೆ. ಟಿಎಂಸಿ ಗೂಂಡಾಗಳು ತಮ್ಮ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದು, ಕಾರಿನ ಗಾಜಿನ ಕಿಟಕಿಗಳನ್ನು ಒಡೆದಿದ್ದು, ನನ್ನ ಮೇಲೂ ದಾಳಿ ನಡೆಸಲು ಮುಂದಾದರು. ಈ ಹಿನ್ನಲೆ ನನ್ನ ಪ್ರವಾಸವನ್ನು ಮೊಟಕುಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಸಚಿವರು ಪಶ್ಚಿಮ ಬಂಗಾಳದ ದಾಳಿ ಖಂಡಿಸಿ ಹೇಳಿಕೆ ನೀಡಿದ್ದರು. ಫಲಿತಾಂಶದ ದಿನ ಪಶ್ಚಿಮ ಬಂಗಾಳದಲ್ಲಿ ಅನೇಕ ಪಕ್ಷದ ಕಾರ್ಯಕರ್ತರನ್ನು ಕೊಲ್ಲಲಾಗಿದೆ, ಅತ್ಯಾಚಾರ, ಹಲ್ಲೆಯಂತಹ ಘಟನೆ ನಡೆಸಲಾಗಿದೆ. ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಎಂದು ಅವರು ಆರೋಪಿಸಿದ್ದರು.
ಮೇ 2 ರಂದು ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆದು, ಕೆಲವರು ಮೃತಪಟ್ಟಿದ್ದು ಮತ್ತು ಕೆಲವರು ಗಾಯಗೊಂಡಿದ್ದಾರೆ. ಅಲ್ಲಿ ಹಿಂಸಾಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಹಲವು ಹಿಂಸಾಚಾರಕ್ಕೆ ಬಂಗಾಳ ಸಾಕ್ಷಿಯಾಗುತ್ತಿದೆ. ಸರಿಸುಮಾರು 14 ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ ಎಂದು ಹಿಂಸಾಚಾರದ ಬಳಿಕ ರಾಜ್ಯಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆರೋಪಿಸಿದ್ದರು. ಈ ಗಲಭೆಯಿಂದ 1 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ ಎಂದಿದ್ದಾರೆ.
ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಅನೇಕ ಜನರು ಕಣ್ಣೀರಿಡುತ್ತಾ ಹೋಘುತ್ತಿರುವ ವಿಡಿಯೋವನ್ನು ಕೂಡ ಬಿಜೆಪಿ ಹಂಚಿಕೊಂಡಿತ್ತು. ಇದರ ಜೊತೆಗೆ ಗಲಭೆಯಿಂದ ಸಾವನ್ನಪ್ಪಿದವರ ಮತ್ತು ಅಂಗಡಿಗಳನ್ನು ದೋಚುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದ್ದವು.
ಘಟನೆ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ ಎಂದಿದ್ದರು. ಅಲ್ಲದೇ ಜನರಿಗೆ ಶಾಂತಿಯನ್ನು ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದರು.
ಬುಧವಾರ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದಿದ್ದಾರು. ಅಲ್ಲದೇ ಚುನಾವಣೆಗಿಂತ ಮುಂಚೆ ಚುನಾವಣಾ ಆಯೋಗ ವರ್ಗಾವಣೆ ಮಾಡಿದ್ದ ಪೊಲೀಸ್ ಅಧಿಕಾರಿಗಳನ್ನು ಮತ್ತೆ ಅವರು ಆ ಹುದ್ದೆಗೆ ನಿಯುಕ್ತಿಗೊಳಿಸಲಾಗಿದೆ.ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರ ಕುರಿತು ಕೇಂದ್ರ ಸರ್ಕಾರ ವರದಿ ಕೋರಿದೆ. ಘಟನೆ ಕುರಿತು ರಾಜ್ಯಪಾಲ ಜಗದೀಪ್ ಧಂಕರ್ ಅವರು ಪ್ರಧಾನಿ ಮೋದಿಗೆ ವಿವರಿಸಿದ್ದಾರೆ.
Comments are closed.