ರಾಷ್ಟ್ರೀಯ

ಕೊರೋನಾದಿಂದ ಸಾವನ್ನಪ್ಪಿದ ಭೂಗತ ಪಾತಕಿ ಛೋಟಾ ರಾಜನ್

Pinterest LinkedIn Tumblr

ನವದೆಹಲಿ: ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವುದಾಗಿ ಶುಕ್ರವಾರ ವರದಿಯಾಗಿದೆ.

ಛೋಟಾ ರಾಜನ್ ಅವರು ಇಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಏಮ್ಸ್ ನಲ್ಲಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ.

ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 62 ವರ್ಷ ವರ್ಷದ ಭೂಗತ ಪಾತಕಿಯನ್ನು ಏಪ್ರಿಲ್ 26 ರಂದು ಏಮ್ಸ್ ಗೆ ದಾಖಲಿಸಲಾಗಿತ್ತು.

ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜನ್ ಅವರನ್ನು ಹಾಜರುಪಡಿಸಲು ಸಾಧ್ಯವಿಲ್ಲ. ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಕಳೆದ ಏಪ್ರಿಲ್ 27 ರಂದು ತಿಹಾರ್ ಜೈಲಿನ ಸಹಾಯಕ ಜೈಲರ್ ದೂರವಾಣಿ ಮೂಲಕ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

ಛೋಟಾ ರಾಜನ್ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ.

Comments are closed.