ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್ ಮುರುಗನ್ ಅವರು ಕೇಂದ್ರ ಸಚಿವ ಸಂಪುಟ ಸೇರಿದ ಬೆನ್ನಲ್ಲೇ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಕಳೆದ ಎರಡು ತಿಂಗಳ ಹಿಂದೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಣ್ಣಾಮಲೈ ಅವರು ಡಿಎಂಕೆ ಅಭ್ಯರ್ಥಿ ಆರ್ ಇಲಂಗೋ ವಿರುದ್ಧ 24 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು.
ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಪೊಲೀಸ್ ಹುದ್ದೆಗೆ ರಾಜಿನಾಮೆ ನೀಡಿದ್ದು ಕಳೆದ ವರ್ಷ ಆಗಸ್ಟ್ 25ರಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
Comments are closed.