ರಾಷ್ಟ್ರೀಯ

ಹಬ್ಬದ ಸಂಭ್ರಮದಲ್ಲಿ ಜನರು ಕೊರೋನಾ ಮರೆಯಬಾರದು, ಮಾಸ್ಕ್ ಧರಿಸಿ ಮಾರ್ಗಸೂಚಿಗಳನ್ನು ಪಾಲನೆ ಮಾಡಿ: ಪ್ರಧಾನಿ ಮೋದಿ

Pinterest LinkedIn Tumblr

ನವದೆಹಲಿ: ಕೋವಿಡ್ ನಮ್ಮ ನಡುವೆಯೇ ಇದ್ದು, ಹಬ್ಬದ ಸಂಭ್ರಮದಲ್ಲಿ ಜನರು ಕೊರೋನಾ ಮರೆಯಬಾರದು. ಮಾಸ್ಕ್ ಧರಿಸಿ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿರುವ ಅವರು, ಮುಂದಿನ ಎಲ್ಲಾ ಹಬ್ಬಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ.

ಈಗಲೂ ಕೋವಿಡ್ ನಮ್ಮ ನಡುವೆಯೇ ಇದೆ. ಹಬ್ಬದ ಸಂಭ್ರಮದಲ್ಲಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಮರೆಯಬಾರದು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಬೇಕು ಎಂದು ಕರೆ ನೀಡಿದ್ದಾರೆ.

ಬಳಿಕ ಲಸಿಕೆ ಕುರಿತು ಮಾತನಾಡಿದ ಅವರು, ಜನರು ಕೋವಿಡ್ ಲಸಿಕೆಯ ಭಯದಿಂದ ಹೊರಬರಬೇಕು. ಲಸಿಕೆ ಪಡೆದ ಬಳಿಕ ಜ್ವರ ಬರಬಹುದು. ಆದರೆ ಇದು ಕೆಲವು ಗಂಟೆಗಳಿಗೆ ಮಾತ್ರ. ಲಸಿಕೆ ಪಡೆಯುವುದನ್ನು ನಿರಾಕರಿಸಿವುದು ಅದಕ್ಕಿಂತ ಅಪಾಯಕಾರಿ. ಲಸಿಕೆ ಪಡೆಯದೇ ನೀವು ನಿಮ್ಮನ್ನು ಮಾತ್ರವಲ್ಲದೆ ನಿಮ್ಮ ಕುಟುಂಬ ಮತ್ತು ಊರಿನವರನ್ನೂ ಅಪಾಯಕ್ಕೆ ಸಿಲುಕಿಸುತ್ತೀರಿ ಎಂದು ತಿಳಿಸಿದ್ದಾರೆ.

Comments are closed.