ರಾಷ್ಟ್ರೀಯ

ಭಾರತದಲ್ಲಿ ಕೊರೋನಾ; 24 ಗಂಟೆಗಳ ಅವಧಿಯಲ್ಲಿ 29,689 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆ: 415 ಮಂದಿ ಬಲಿ

Pinterest LinkedIn Tumblr

oron

ನವದೆಹಲಿ; ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್’ನ ಏರಿಳಿಕೆಯ ಹಾದಿ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 29,689 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 415 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,14,80,312ಕ್ಕೆ ತಲುಪಿದ್ದು, ಸಾವಿನ 4,21,382ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 3,98,100ಕ್ಕೆ ಕುಸಿದಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 42,363 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,06,21,469ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,20,110 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 45,91,64,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 44,19,12,395 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Comments are closed.