ರಾಷ್ಟ್ರೀಯ

24 ತಾಸುಗಳ ಅವಧಿಯಲ್ಲಿ ದೇಶಾದ್ಯಂತ 38,353 ಕೋವಿಡ್‌ ಪ್ರಕರಣ ಪತ್ತೆ; 497 ಮಂದಿ ಕೋವಿಡ್ ಗೆ ಬಲಿ

Pinterest LinkedIn Tumblr

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,353 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 140 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ. ಇದೇ ಅವಧಿಯಲ್ಲಿ 497 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,20,36,511ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,29,125ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,86,351ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 40,013 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,12,20,981ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,77,962 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 48,50,56,507 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 51.90 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ

Comments are closed.