ರಾಷ್ಟ್ರೀಯ

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜಿನಾಮೆ.!

Pinterest LinkedIn Tumblr

ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜಿನಾಮೆ ಸಲ್ಲಿಸಿದರು. ರಾಜಕೀಯದಲ್ಲಿ ಇದೊಂದು ಅಚ್ಚರಿಯ ಬೆಳವಣಿಗೆ ಎಂದು ವಿಶ್ಲೇಶಿಸಲಾಗುತ್ತಿದೆ.

ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೂಪಾಣಿ, ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಬಿಜೆಪಿ ನಾಯಕತ್ವಕ್ಕೆ ಧನ್ಯವಾದಗಕು. ದಿಢೀರ್ ರಾಜೀನಾಮೆಯ ಹಿಂದಿನ ಕಾರಣಗಳ ಬಗ್ಗೆ ಪ್ರಶ್ನೆಗಳ ಬಗ್ಗೆ ಉತ್ತರಿಸಿದ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧನ್ಯವಾದ ಎಂದು ಹೇಳಿದ್ದಾರೆ.

ರಾಜೀನಾಮೆಯ ಹಿಂದಿನ ನಿಜವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯಗಳು ವಿಜಯ್​ರನ್ನು ಕೆಳಗಿಳಿಯುವಂತೆ ಮಾಡಿರಬಹುದು ಎಂಬ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ರೂಪಾನಿ, 2017ರ ಡಿಸೆಂಬರ್‌ನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು ಮುಂದಿನ ವರ್ಷ ತನ್ನ ಅಧಿಕಾರಾವಧಿಯನ್ನು ಮುಗಿಸಬೇಕಿತ್ತು.

 

Comments are closed.