ರಾಷ್ಟ್ರೀಯ

ಗುಜರಾತ್‍ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

Pinterest LinkedIn Tumblr

ಗಾಂಧಿನಗರ: ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ದಿಢೀರ್ ಬೆಳವಣೆಗೆಯಲ್ಲಿ ವಿಜಯ್ ರೂಪಾಣಿಯವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ಬಳಿಕ ಭೂಪೇಂದ್ರ ಪಟೇಲ್ ಅವರು ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.

ರೂಪಾಣಿ ರಾಜೀನಾಮೆ ಬೆನ್ನಲ್ಲೆ ನೂತನ ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಮುಖವಾಗಿ ಮೂರು ಜನರ ಹೆಸರುಗಳು ಕೇಳಿ‌ಬಂದಿತ್ತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಕ್ಯಾಬಿನೆಟ್ ಮಂತ್ರಿ ಆರ್.ಸಿ ಫಾಲ್ದು ಅವರ ಹೆಸರು ಮುಖ್ಯಮಂತ್ರಿ ಸ್ಥಾನದ ರೇಸ್‍ನಲ್ಲಿದ್ದವು.

ಇಂದು ರಾಜ್ಯಕ್ಕೆ ಆಗಮಿಸಿದ ಬಿಜೆಪಿ ವರಿಷ್ಠರು ಸಭೆ ನಡೆಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಹೆಸರನ್ನು ಘೋಷಿಸಿದರು.

Comments are closed.