ಮನೋರಂಜನೆ

ಬಹುಭಾಷಾ ನಟ ಸೋನು ಸೂದ್ 20 ಕೋಟಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ: ಆದಾಯ ತೆರಿಗೆ ಇಲಾಖೆ

Pinterest LinkedIn Tumblr

ಮುಂಬಯಿ: ಬಹುಭಾಷಾ ನಟ ಸೋನು ಸೂದ್ ಅವರು ಸುಮಾರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಸೋನು ಸೂದ್ ಅವರ ಮುಂಬೈಯಲ್ಲಿನ ಮನೆ ಸೇರಿದಂತೆ ಒಟ್ಟು ಒಟ್ಟು 28 ಕಚೇರಿಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿತ್ತು. ಲಕ್ನೊ ಮೂಲದ ಮೂಲಭೂತ ಸೌಕರ್ಯಗಳಲ್ಲಿ ತೊಡಗಿರುವ ಹಲವು ಕೈಗಾರಿಕೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಶೋಧ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ಶೋಧ ಕಾರ್ಯಾಚರಣೆಯಲ್ಲಿ ನಟ ಸೋನು ಸೂದ್ ಮತ್ತು ಅವರ ಸಹಚರರು ಸುಮಾರು 20 ಕೋಟಿ ರೂಪಾಯಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದು ಬೆಳಕಿಗೆ ಬಂದಿದೆ ಎಂದು ಇಲಾಖೆ ಹೇಳಿದೆ. ಇದುವರೆಗೆ ನಟನಿಗೆ ಸೇರಿದ ಮುಂಬೈ, ಲಕ್ನೊ, ಕಾನ್ಪುರ, ಜೈಪುರ, ದೆಹಲಿ ಮತ್ತು ಗುರುಗ್ರಾಮ್ ಗಳಲ್ಲಿರುವ ಒಟ್ಟು 28 ಕಚೇರಿಗಳು, ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಬುಧವಾರದಿಂದ ದಾಳಿ ನಡೆಸಿ ಶೋಧ ನಡೆಸಿದ್ದರು.

ಕೋವಿಡ್-19 ಲಾಕ್ ಡೌನ್ ಸಂದರ್ಭ ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಲು ಸಹಾಯ ಮಾಡಿದ್ದು ಮಾತ್ರವಲ್ಲದೆ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ನೆರವು ನೀಡಿದ ನಟ ಸೋನು ಸೂದ್ ಬಗ್ಗೆ ಬಾರೀ ಪ್ರಶಂಸೆ ವ್ಯಕ್ತವಾಗಿತ್ತು.

Comments are closed.