ರಾಷ್ಟ್ರೀಯ

ಜಾತಿ ನಿಂದನೆ ಪ್ರಕರಣದಲ್ಲಿ ಮಾಜಿ ಕ್ರಿಕೇಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

Pinterest LinkedIn Tumblr

ಹಿಸ್ಸಾರ್: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಹೇಳಿದ್ದಾರೆ.

ಕಳೆದ ವರ್ಷ ಇನ್‌ಸ್ಟಾಗ್ರಾಮ್ ಚಾಟ್‌ನಲ್ಲಿ ಯುವರಾಜ್ ಸಿಂಗ್ ಅವರು ಪರಿಶಿಷ್ಟ ಜಾತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಲವು ದಿನಗಳ ಹಿಂದೆ ಯುವರಾಜ್ ಸಿಂಗ್ ಹೈಕೋರ್ಟ್​​ಗೆ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದರು. ಈ ಕಾರಣದಿಂದಾಗಿ, ಹಂಸಿ ಪೊಲೀಸರು ಅವರನ್ನು ಔಪಚಾರಿಕವಾಗಿ ಬಂಧಿಸಿ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆ ಬಳಿಕ ನಿರೀಕ್ಷಣಾ ಜಾಮೀನು ಪತ್ರಗಳ ಆಧಾರದ ಮೇಲೆ ಬಿಡುಗಡೆ ಮಾಡಿದ್ದಾರೆ.

Comments are closed.