ರಾಷ್ಟ್ರೀಯ

ಕೇದಾರನಾಥದಲ್ಲಿ ಆದಿಶಂಕರಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿಯವರಿಂದ ಅನಾವರಣ

Pinterest LinkedIn Tumblr

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಖಾಂಡದ ಕೇದಾರನಾಥಕ್ಕೆ ಭೇಟಿ ನೀಡಿದ್ದು, ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಶಿವನಿಗೆ ನಡೆದ ಮಹಾ ರುದ್ರಾಭಿಷೇಕ ಪೂಜೆಯಲ್ಲಿ ಭಾಗವಹಿಸಿದ ನರೇಂದ್ರ ಮೋದಿಯವರು ಶಿವನಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ಪ್ರತಿಮೆ 35 ಟನ್‌‌‌‌ ತೂಕವಿದ್ದು, 12 ಅಡಿ ಎತ್ತರವಿದೆ. ಇದನ್ನು ಹೆಗ್ಗಡದೇವನಕೋಟೆಯಿಂದ ತರಲಾಗಿದ್ದು, 120 ಟನ್‌ನ ಕೃಷ್ಣ ಶಿಲೆ ಬಳಸಲಾಗಿದೆ. ಇದು ಬಿಸಿಲು, ಮಳೆ, ಗಾಳಿ ಹಾಗೂ ಹವಾಮಾನವನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ.

2013ರಲ್ಲಿ ಭಾರೀ ಪ್ರವಾಹ ಉಂಟಾಗಿ ಕೇದಾರನಾಥದಲ್ಲಿರುವ ಆದಿಶಂಕರಾಚಾರ್ಯರ ಸಮಾಧಿ ಕೊಚ್ಚಿ ಹೋಗಿತ್ತು. ಅದರ ಮರುನಿರ್ಮಾಣದ ಭಾಗವಾಗಿ ಕೇದಾರೇಶ್ವರ ದೇವಾಲಯದ ಹಿಂಭಾಗದಲ್ಲಿ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಇದನ್ನು ಸ್ಥಾಪಿಸಲಾಗಿದೆ.

Comments are closed.