ರಾಷ್ಟ್ರೀಯ

3 ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್: ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ

Pinterest LinkedIn Tumblr

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಗುರು ನಾನಕ್ ಜಯಂತಿಯ ದಿನವಾದ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಮಹತ್ವದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ರೈತರು ದಯಮಾಡಿ ಪ್ರತಿಭಟನೆ ನಿಲ್ಲಿಸಬೇಕು ಎಂದಿದ್ದಾರೆ.

ಬಿತ್ತನೆ ಬೀಜ, ಮಾರುಕಟ್ಟೆ ಉಳಿತಾಯ ಯೋಜನೆ, ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ. ಅದರೆ ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

ರೈತರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಆದ್ಯತೆ, ದೇಶದಲ್ಲಿ 100 ರಲ್ಲಿ 80 ರೈತರು ಸಣ್ಣ ಹಿಡುವಳಿ ರೈತರಾಗಿದ್ದಾರೆ. ದೇಶದಲ್ಲಿ 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಸಣ್ಣ ರೈತರ ಸಮಸ್ಯೆ ಬಗೆ ಹರಿಸಲು ಪ್ರಯತ್ನ ಮಾಡುತ್ತೇವೆ ಎಂದರು.

 

Comments are closed.